ಹಾಸನದಲ್ಲಿ ರಸ್ತೆ ಅಪಘಾತ: ಇಬ್ಬರು ಸಹೋದರರ ಸಾವು 

ಹಾಸನ ಜಿಲ್ಲೆಯ ಕೆಂಚಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳೆದ ರಾತ್ರಿ ಕಾರ್ ವೊಂದು ಟ್ರಕ್‍ ಗೆ ಡಿಕ್ಕಿ ಹೊಡೆದು ಕಾರ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಸಹೋದರರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 
ಅಪಘಾತಕ್ಕೀಡಾದ ಕಾರು
ಅಪಘಾತಕ್ಕೀಡಾದ ಕಾರು
Updated on

ಹಾಸನ:  ಜಿಲ್ಲೆಯ ಕೆಂಚಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳೆದ ರಾತ್ರಿ ಕಾರ್ ವೊಂದು ಟ್ರಕ್‍ ಗೆ ಡಿಕ್ಕಿ ಹೊಡೆದು ಕಾರ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಸಹೋದರರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 

ಮೃತ ನತದೃಷ್ಟ ಸಹೋದರರನ್ನು ಬೆಳ್ತಂಗಡಿ ತಾಲ್ಲೂಕಿನ ಜಯಪ್ರಕಾಶ್‍ (25) ಮತ್ತು ಯೋಗೇಶ್‍ (23) ಎಂದು ಗುರುತಿಸಲಾಗಿದೆ. ರಸ್ತೆ ತಡೆಯೊಂದರಲ್ಲಿ ಟ್ರಕ್‍ ಚಾಲಕ ಏಕಾಏಕಿ ಬ್ರೇಕ್‍ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹಾಸನದ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 

ವೇಗವಾಗಿ ಬಂದ ಕಾರು ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಹಾಸನ ಸಂಚಾರಿ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಹಾಸನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com