ಸಂಸದರಿಗೆ 30 ಗಂಟೆಗಳ ಭಾಷಾ ತರಬೇತಿ: ಕನ್ನಡ ಕಡೆಗಣಿಸಿದ ಕೇಂದ್ರ ಸರ್ಕಾರ, ಕೆಡಿಎ ಕಿಡಿ

ಲೋಕಸಭಾ ಸಚಿವಾಲಯದ ಸಂಸದೀಯ ಸಂಶೋಧನಾ ಮತ್ತು ತರಬೇತಿ ಸಂಸ್ಥೆಯು ಎಲ್ಲಾ ಸಂಸದರು ಹಾಗೂ ಅಧಿಕಾರಿಗಳಿಗೆ 30 ಗಂಟೆಗಳ ವರ್ಚುವಲ್ ಭಾಷಾ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ವೇಳೆ ಕನ್ನಡ ಕಡೆಗಣಿಸಿರುವ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೀವ್ರವಾಗಿ ಕಿಡಿಕಾರಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಲೋಕಸಭಾ ಸಚಿವಾಲಯದ ಸಂಸದೀಯ ಸಂಶೋಧನಾ ಮತ್ತು ತರಬೇತಿ ಸಂಸ್ಥೆಯು ಎಲ್ಲಾ ಸಂಸದರು ಹಾಗೂ ಅಧಿಕಾರಿಗಳಿಗೆ 30 ಗಂಟೆಗಳ ವರ್ಚುವಲ್ ಭಾಷಾ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ವೇಳೆ ಕನ್ನಡ ಕಡೆಗಣಿಸಿರುವ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೀವ್ರವಾಗಿ ಕಿಡಿಕಾರಿದೆ. 

ಜೂನ್.22 ರಿಂದ ಈ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲಾ ಸಂಸದರು ಹಾಗೂ ಅಧಿಕಾರಿಗಳಿಗೆ 6 ವಿದೇಶಿ ಭಾಷೆಗಳು ಹಾಗೂ 6 ಭಾರತದ ಭಾಷೆಗಳ ಕುರಿತು ತರಬೇತಿ ನೀಡುತ್ತಿದೆ. 

ಫ್ರೆಂಚ್, ಪೋರ್ಚುಗೀಸ್, ಜಪಾನೀಸ್, ರಷ್ಯನ್, ಸ್ಪ್ಯಾನಿಷ್ ಮತ್ತು ಜರ್ಮನ್ 6 ವಿದೇಶಿ ಭಾಷೆಗಳು ಹಾಗೂ ಭಾರತದ ಬಂಗಾಳಿ, ಗುಜರಾತಿ, ಮರಾಠಿ, ತಮಿಳು, ತೆಲುಗು ಹಾಗೂ ಒಡಿಶಾ ಭಾಷೆಗಳ ಕುರಿತು ತರಬೇತಿ ನೀಡುತ್ತಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥ ಟಿ.ಎಸ್.ನಾಗಾಭರಣ ಅವರು, ಬೇರೆ ಭಾಷೆಗಳನ್ನು ಸೇರ್ಪಡೆಗೊಳಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಕನ್ನಡ ಸೇರ್ಪಡೆಗೊಳಿಸದೇ ಇರುವುದು ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದಂತಾಗಿದೆ. ಲೋಕಸಭೆಗೆ ರಾಜ್ಯದಿಂದಲೇ ಸಾಕಷ್ಟು ಜನರು ಸಂಸದರಾಗಿ ಆಯ್ಕೆಯಾಗಿದ್ದಾರೆ. ಪಟ್ಟಿಯಲ್ಲಿ ಕನ್ನಡ ಸೇರ್ಪಡೆಗೊಳಿಸದೇ ಹೋದಲ್ಲಿ, ಈ ಕುರಿತು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com