ಸಿಡಿ ಕೇಸ್: ಯುವತಿ ಹೇಳಿಕೆ ರದ್ದು ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ವಜಾ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ಪ್ರಮಾಣೀಕೃತ ಹೇಳಿಕೆ ರದ್ದತಿ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿ ಆದೇಶಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ಪ್ರಮಾಣೀಕೃತ ಹೇಳಿಕೆ ರದ್ದತಿ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿ ಆದೇಶಿಸಿದೆ. 

ತೀವ್ರ ಒತ್ತಡದಲ್ಲಿದ್ದ ಸಂದರ್ಭದಲ್ಲಿ ತಮ್ಮ ಪುತ್ರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದು, ಆ ಹೇಳಿಕೆ ರದ್ದುಗೊಳಿಸಬೇಕು ಎಂದು ಕೋರಿ ಯುವತಿಯ ತಂದೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಯುವತಿ ದಾಖಲಿಸಿರುವ ಹೇಳಿಕೆಯ ಸತ್ಯಾಸತ್ಯತೆ ನ್ಯಾಯಾಲಯದ ವಿಚಾರಣೆಯಲ್ಲಿ ತಿಳಿಯಬೇಕಿದೆ. ಈ ಹೇಳಿಕೆಯನ್ನು ಪ್ರಶ್ನಿಸಲು ಅರ್ಜಿದಾರರಿಗೆ ಅವಕಾಶವಿಲ್ಲ ಎಂದು ತಿಳಿಸಿದರು. ಹೀಗಾಗಿ ಯುವತಿಯ ಪ್ರಮಾಣಿಕೃತ ಹೇಳಿಕೆಯನ್ನು ರದ್ದುಪಡಿಸಲು ಆಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. 

ನ್ಯಾಯಾಲಯದಲ್ಲಿ ನನ್ನ ಮಗಳು ಹೇಳಿಕೆ ದಾಖಲಿಸಿದ್ದಾಳೆ. ಸ್ವಯಿಚ್ಛೆಯಿಂದ ಹೇಳಿಕೆ ನೀಡುವ ಸ್ಥಿತಿಯಲ್ಲಿ ಆಕೆ ಇರಲಿಲ್ಲ. ಯಾವುದೋ ಒತ್ತಡ, ಪ್ರಭಾವಕ್ಕೆ ಒಳಗಾಗಿ ಈ ಹೇಳಿಕೆ ದಾಖಲಿಸಿದ್ದಾಳೆ. ಆದ್ದರಿಂದ ಅವಳ ಹೇಳಿಕೆ ಪರಿಗಣಿಸಬಾರದು ಎಂದು ಕೋರಿ ಯುವತಿಯ ತಂದೆ ಹೈಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com