

ಬೆಂಗಳೂರು: ಮರಳಿ ಕಾಲೇಜಿಗೆ ಎನ್ನುವ ಘೋಷ ವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಹೀಗಾಗಿ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ತೀರ್ಮಾನಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಲಸಿಕೆ ನೀಡುವ ಕುರಿತು ನಿರ್ಧರಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಸಮನ್ವಯದೊಂದಿಗೆ ಹಾಗೂ ಭಾರತ ಸರ್ಕಾರದ ಮಾರ್ಗಸೂಚಿಯಂತೆ ಈ ಕೆಳಕಂಡ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.