ಕಪ್ಪು ಶಿಲೀಂದ್ರ: ಹಾಸಿಗೆ ಮೀಸಲಿರಿಸಿ, ವಿವರ ಪ್ರದರ್ಶಿಸುವಂತೆ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ

ಕಪ್ಪು ಶಿಲೀಂಧ್ರದ ಚಿಕಿತ್ಸೆಗಾಗಿ ಹಾಸಿಗೆಗಳನ್ನು ಮೀಸಲಿಡುವಂತೆ ಹಾಗೂ ಲಭ್ಯವಿರುವ ಹಾಸಿಗೆಗಳ ವಿವರವನ್ನು ಪ್ರದರ್ಶಿಸುವಂತೆ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಪ್ಪು ಶಿಲೀಂಧ್ರದ ಚಿಕಿತ್ಸೆಗಾಗಿ ಹಾಸಿಗೆಗಳನ್ನು ಮೀಸಲಿಡುವಂತೆ ಹಾಗೂ ಲಭ್ಯವಿರುವ ಹಾಸಿಗೆಗಳ ವಿವರವನ್ನು ಪ್ರದರ್ಶಿಸುವಂತೆ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹೊರಡಿಸಿರುವ ಸುತ್ತೋಲೆಯಲ್ಲಿ, ಸರ್ಕಾರಿ ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಪ್ಪು ಶಿಲೀಂಧ್ರ ಸೋಂಕಿತರನ್ನು ದಾಖಲಿಸಿಕೊಂಡು, ಚಿಕಿತ್ಸೆ ಒದಗಿಸಲು ಈಗಾಗಲೇ ಸೂಚಿಸಲಾಗಿದೆ ಎಂದಿದ್ದಾರೆ.

ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಚಿಕಿತ್ಸೆಗೆ ಅಗತ್ಯ ಹಾಸಿಗೆಗಳನ್ನು ಕಾಯ್ದಿರಿಸಿ, ಸೋಂಕಿತರಿಗೆ ಚಿಕಿತ್ಸೆ ನೀಡಬೇಕು. ಜೊತೆಗೆ, ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಲಭ್ಯವಿರುವ ಹಾಸಿಗೆಗಳ ವಿವರ, ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳ ಸಂಖ್ಯೆ ಒಳಗೊಂಡ ಮಾಹಿತಿಯನ್ನು ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ಸೂಚಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com