ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ
ರಾಜ್ಯ
ಕಾಸರಗೋಡಿನ ಗಡಿ ಗ್ರಾಮಗಳ ಹೆಸರು ಮಲೆಯಾಳಂಗೆ ಬದಲು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಖಂಡನೆ
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸುವ ಕೇರಳ ಸರ್ಕಾರದ ನಡೆಯನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿದೆ.
ಬೆಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸುವ ಕೇರಳ ಸರ್ಕಾರದ ನಡೆಯನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿದೆ.
ಈ ಕುರಿತು ಪ್ರಾಧಿಕಾರದ ಅಧ್ಯಕ್ಷರ ಡಾ.ಸಿ. ಸೋಮಶೇಖರ ಅವರು ಕೇರಳ ಸರ್ಕಾರ ಮತ್ತು ಅಲ್ಲಿನ ಲೋಕೋಪಯೋಗಿ ಹಾಗೂ ಕಂದಾಯ ಸಚಿವರಿಗೆ ಪತ್ರ ಬರೆದಿದ್ದು, ಗ್ರಾಮಗಳ ಕನ್ನಡದ ಹೆಸರುಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಶುಕ್ರವಾರ ಭೇಟಿ ಮಾಡಿ, ನಾಮಫಲಕ ಬದಲಾಯಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.


