

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 3,604 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,34,630ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 89 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,743ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 788 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,11,430ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 7,699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,98,822ಕ್ಕೆ ಏರಿಕೆಯಾಗಿದೆ. ಇನ್ನು 1,01,042 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,64,636 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 3,604 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.18ಕ್ಕೆ ಇಳಿದಿದೆ.