ಆಗಸ್ಟ್ ವೇಳೆಗೆ ರಾಜ್ಯದಲ್ಲಿ ಕಾಲೇಜುಗಳ ಆರಂಭಕ್ಕೆ ಚಿಂತನೆ: ಡಿಸಿಎಂ ಅಶ್ವತ್ ನಾರಾಯಣ್

ರಾಜ್ಯದ ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಆಗಸ್ಟ್ ವೇಳೆಗೆ ಪುನರಾರಂಭಿಸಲು, ಜುಲೈ ಅಂತ್ಯಕ್ಕೂ ಮೊದಲು ಕಾಲೇಜಿಗೆ ಹೋಗುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ನೀಡುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ...
ಡಿಸಿಎಂ ಅಶ್ವತ್ ನಾರಾಯಣ್
ಡಿಸಿಎಂ ಅಶ್ವತ್ ನಾರಾಯಣ್

ಬೆಂಗಳೂರು: ರಾಜ್ಯದ ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಆಗಸ್ಟ್ ವೇಳೆಗೆ ಪುನರಾರಂಭಿಸಲು, ಜುಲೈ ಅಂತ್ಯಕ್ಕೂ ಮೊದಲು ಕಾಲೇಜಿಗೆ ಹೋಗುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ನೀಡುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ ನಾರಾಯಣ್ ಅವರು ಹೇಳಿದ್ದಾರೆ. 

ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ಜೊತೆಗೆ ಲಸಿಕೆ ಅಭಿಯಾನ ಹಾಗೂ ಮರಳಿ ಕಾಲೇಜಿಗೆ ಕಾರ್ಯಕ್ರಮ ಕುರಿತು ಮಾತನಾಡಿರುವ ಅವರು, ಜುಲೈ ವೇಳೆಗೆ ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ಲಸಿಕೆಗಳನ್ನು ನೀಡಲಾಗುತ್ತದೆ. ಶೀಘ್ರಗತಿಯಲ್ಲಿ ಪದವಿ ಕಾಲೇಜುಗಳನ್ನು ಆರಂಭಿಸುವಂತೆ ಡಾ.ದೇವಿಶೆಟ್ಟಿ ಸಮಿತಿ ವರದಿ ಸಲ್ಲಿಸಿದ್ದು, ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. 

ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿಗಳಿಗೆ ಲಸಿಕೆ ನೀಡಲು ಸರ್ಕಾರ 20 ಲಕ್ಷ ಲಸಿಕೆಗಳನ್ನು ನಿಗದಿಪಡಿಸಿದೆ. ಶೈಕ್ಷಣಿಕ ಮತ್ತು ಆರೋಗ್ಯ ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ೆಂದು ತಿಳಿಸಿದ್ದಾರೆ. 

ಕಾಲೇಜುಗಳ ಆರಂಭಕ್ಕೆ ಈಗಾಗಲೇ ಚಿಂತನೆ ನಡೆಸುತ್ತಿದ್ದು, ಶಿಕ್ಷಣ ಸಂಸ್ಥೆಗಳು ತೆರೆದ ಬಳಿಕ ವಿದ್ಯಾರ್ಥಿಗಳು ಲಸಿಕಾ ಪ್ರಮಾಣಪತ್ರವನ್ನು ಕಾಲೇಜು ಆಡಳಿತ ಮಂಡಳಿಗೆ ಸಲ್ಲಿಸಬೇಕಾಗುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com