ಶಿವಮೊಗ್ಗ: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ.
ಕಳೆದ ಒಂದು ವಾರದಿಂದ ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯು ಜೋಗ ಜಲಪಾತದ ಸೊಬಗು ಹೆಚ್ಚಿಸಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ.
ಲಾಕ್‌ಡೌನ್ ಕಾರಣದಿಂದಾಗಿ ಪ್ರವಾಸಿಗರಿಲ್ಲದೇ ಸ್ಥಳೀಯ ವ್ಯಾಪಾರ, ವಹಿವಾಟು ಕುಂಠಿತಗೊಂಡಿತ್ತು. ಇದೀಗ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಲಾಗಿದ್ದು, ಮತ್ತೆ ಆರ್ಥಿಕ ವಹಿವಾಟು ಗರಿಗೆದರಲಿದೆ.
Advertisement