ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 563 ಸೇರಿ 2,576 ಪ್ರಕರಣ ಪತ್ತೆ, 93 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,576 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,37,206ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,576 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,37,206ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 93 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,836ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 563 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,11,993ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 5,933 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,04,755ಕ್ಕೆ ಏರಿಕೆಯಾಗಿದೆ. ಇನ್ನು 97,592 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,33,917 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 2,576 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.92ಕ್ಕೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com