ಕೊರೋನಾ ವಿರುದ್ಧ ದಿಟ್ಟ ಹೋರಾಟ: ಮಾನವ ಸಂಪನ್ಮೂಲ ಹೆಚ್ಚಿಸಲು ಬಿಬಿಎಂಪಿ ಮುಂದು

ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಳಿಕ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ಎದುರಿಸಲು ಮಾನವ ಸಂಪನ್ಮೂಲ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಳಿಕ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ಎದುರಿಸಲು ಮಾನವ ಸಂಪನ್ಮೂಲ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 

ಕೊರೋನಾ ನಿಯಂತ್ರಣಕ್ಕೆ ಟ್ರಯಾಜಿಂಗ್ ಕೇಂದ್ರಗಳಲ್ಲಿ ಹಾಸಿಗೆ ಹಂಚಿಗೆ ಹಾಗೂ ಸೋಂಕಿತರ ಸಂಪರ್ಕಿತರ ಪತ್ತೆ ಕಾರ್ಯವನ್ನು ಸರ್ಕಾರ ಚುರುಕುಗೊಳಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾನವ ಸಂಪನ್ಮೂಲ ಹೆಚ್ಚಿಸಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. 

ಪರಿಸ್ಥಿತಿ ಎದುರಿಸಲು ಮಾನವಶಕ್ತಿ ಹೆಚ್ಚಾಗಿರುವುದು ಮುಖ್ಯವಾಗಿದ್ದು, ಇದರತ್ತ ಗಮನಹರಿಸಲಾಗುತ್ತಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಣದೀಪ್ ಅವರು ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಳಿಕ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ಎದುರಿಸಲು ಮಾನವ ಶಕ್ತಿ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ. 

ಕೊರೋನಾ ನಿಯಂತ್ರಣಕ್ಕೆ ಟ್ರಯಾಜಿಂಗ್ ಕೇಂದ್ರಗಳಲ್ಲಿ ಹಾಸಿಗೆ ಹಂಚಿಗೆ ಹಾಗೂ ಸೋಂಕಿತರ ಸಂಪರ್ಕಿತರ ಪತ್ತೆ ಕಾರ್ಯವನ್ನು ಸರ್ಕಾರ ಚುರುಕುಗೊಳಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾನವ ಶಕ್ತಿ ಹೆಚ್ಚಿಸಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. 

ಪರಿಸ್ಥಿತಿ ಎದುರಿಸಲು ಮಾನವಶಕ್ತಿ ಹೆಚ್ಚಾಗಿರುವುದು ಮುಖ್ಯವಾಗಿದ್ದು, ಇದರತ್ತ ಗಮನಹರಿಸಲಾಗುತ್ತಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಣದೀಪ್ ಅವರು ಹೇಳಿದ್ದಾರೆ. 

ಕೊರೋನಾ ವಿರುದ್ಧ ದಿಟ್ಟ ಹೋರಾಟಕ್ಕೆ ಸೂಕ್ತ ರೀತಿಯ ಮಾನವಶಕ್ತಿಯ ಅಗತ್ಯವಿದೆ. ಮನೆಗಳಿಗೆ ಭೇಟಿ ನೀಡಿ ಚಿಕಿತ್ಸೆ ನೀಡುವುದ, ಕಂಟೈನ್ಮೆಂಟ್ ಝೋನ್ ಗಳ ಪರಿಶೀಲನೆ, ಟ್ರಯಾಜಿಂಗ್ ಕೇಂದ್ರಗಳಲ್ಲಿ ಸೇವೆ, ಸೋಂಕಿತರ ಸಂಪರ್ಕ ಪತ್ತೆ, ಮನೆ ಮನೆ ಸಮೀಕ್ಷೆ ನಡೆಸಲು ಸಿಬ್ಬಂದಿಗಳ ಅಗತ್ಯವಿದೆ. ಪ್ರತಿಯೊಂದು ಉದ್ದೇಶಕ್ಕೂ ಬಿಬಿಎಂಪಿ ಈಗಾಗಲೇ 300 ಆಶಾ ಕಾರ್ಯಕರ್ತೆಯನ್ನು ನಿಯೋಜಿಸಿದೆ. ಈ ಬಲವನ್ನು ಇದೀಗ 871 ಮತ್ತು 1,622ಕ್ಕೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ಜಂಟಿ ಆರೋಗ್ಯ ಇನ್ಸ್'ಪೆಕ್ಟರ್ ಸಂಖ್ಯೆ ಏರಿಕೆ ಮಾಡುವಂತೆಯೂ ಆಗ್ರಹಗಳು ಕೇಳಿ ಬರುತ್ತಿವೆ ಎಂದು ತಿಳಿಸಿದ್ದಾರೆ. 

ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ಶೀಘ್ರದಲ್ಲಿ ಆರಂಭ ಮಾಡುವಂತೆ ರಾಜ್ಯ ಸರ್ಕಾರ, ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಟ್ರಯಾಜಿಂಗ್ ಕೇಂದ್ರಗಳಲ್ಲಿ ತಪಾಸಣೆ ನಡೆಸಿದ ಬಳಿಕವೇ ಹಾಸಿಗೆ ಹಂಚಿಗೆ ಮಾಡಲಾಗುತ್ತಿದೆ. ಹೀಗಾಗಿ ಸಿಬ್ಬಂದಿಗಳ ನೇಮಕಾತಿ ಅಗತ್ಯವಿದೆ. ಹೋಂ ಐಸೋಸೇಷನ್ ಆಯ್ಕೆ ನೀಡುವುದಕ್ಕೂ ಮುನ್ನ ಸೋಂಕಿತ ವ್ಯಕ್ತಿಯ ಆರೋಗ್ಯವನ್ನು ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸುತ್ತಾರೆಂದಿದ್ದಾರೆ. 

ಸೋಂಕಿಗೊಳಗಾಗಿರುವ ವ್ಯಕ್ತಿಗಳ ಮೇಲೆ ನಿಗಾ ಇಡುವಂತೆ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಮತ್ತು ಅಪಾರ್ಟ್'ಮೆಂಟ್ ಸಂಕೀರ್ಣದ ಸದಸ್ಯರಿಗೆ ಸೂಚಿಸಲಾಗಿದೆ. ಒಳಾಂಗಣದಲ್ಲಿಯೇ ಜನರು ಇರುವುದರಿಂದ ಕೋವಿಡ್ ನಿಯಮಗಳನ್ನು ಮುರಿಯಬಾರದು. ವಿಪತ್ತು ನಿರ್ವಹಣಾ ಮಾನದಂಡಗಳನ್ನು ಉಲ್ಲಂಘನೆ ಮಾಡಬಾರದು, ರೂಪಾಂತರಿ ಕೊರೋನಾ ಆತಂಕ ಕೂಡ ಶುರುವಾಗಿದ್ದು, ಸೋಂಕಿತರ ಮನೆಗಳ ಮೇಲೆ ಹೆಚ್ಚಿನ ನಿಗಾ ಇಡಬೇಕು. ಇದಕ್ಕೆ ಹೆಚ್ಚಿನ ಸಿಬ್ಬಂದಿಗಳ ನಿಯೋಜನೆ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com