ಸಿಎಂ ಬಿಎಸ್ ವೈ
ಸಿಎಂ ಬಿಎಸ್ ವೈ

ಗಡಿ ಜಿಲ್ಲೆಗಳಿಗೆ ಮಲಯಾಳಿ ಹೆಸರು: ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಾ. ಸಿ.ಸೋಮಶೇಖರ್; ಕೇರಳ ಸಿಎಂಗೆ ಸರ್ಕಾರ ಪತ್ರ

ಕರ್ನಾಟಕ-ಕೇರಳ ಗಡಿ ಜಿಲ್ಲೆಗಳಲ್ಲಿನ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವ ವಿಚಾರವಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ  ತಂದರು.
Published on

ಬೆಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಗಳಲ್ಲಿನ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವ ವಿಚಾರವಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ  ತಂದರು.

ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಸೋಮವಾರ ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ  ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವುದನ್ನು ಸಿಎಂ ಗಮನಕ್ಕೆ ತಂದರು. ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

ಸಿಎಂ ಭರವಸೆ
ಕಾಸರಗೋಡು ಮತ್ತು ಮಂಜೇಶ್ವರ ಭಾಗದಲ್ಲಿ ಕನ್ನಡಿಗರು ಮತ್ತು ಮಲಯಾಳ ಭಾಷಿಗರು ಪರಸ್ಪರ ಸಹಬಾಳ್ವೆಯಿಂದ ಸಹೋದರರಂತೆ ಬದುಕನ್ನು ನಿರ್ವಹಿಸುತ್ತಿದ್ದು, ಕನ್ನಡ ಭಾಷೆಯ ಸಾಂಸ್ಕೃತಿಕ, ಐತಿಹಾಸಿಕ ಮಹತ್ವವುಳ್ಳ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂಬ ವಿಷಯವನ್ನು ಕೇರಳ  ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಗ್ರಾಮಗಳ ಹೆಸರುಗಳ ಬದಲಾವಣೆಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಪತ್ರ ಬರೆಯುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಪ್ರಯತ್ನ ಕೇರಳ ಸರ್ಕಾರದ ಗಮನಕ್ಕೆ ಬಾರದೆಯೇ ಕೇವಲ ಸ್ಥಳೀಯ ಸಂಸ್ಥೆಗಳ ಹಂತದಲ್ಲಿಯೇ ನಡೆದಿರಬಹುದೆಂಬ ವಿಷಯವನ್ನು ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಕೇರಳ ಸಿಎಂಗೆ ಸರ್ಕಾರ ಪತ್ರ
ಈ ಬೆಳವಣಿಗೆ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪತ್ರ ಬರೆದಿದ್ದು, ಗ್ರಾಮಗಳ ಹೆಸರು ಬದಲಾವಣೆ ಕುರಿತು ಸಿಎಂ ಗಮಕ್ಕೆ ತಂದಿದ್ದಾರೆ. ಅಲ್ಲದೆ ಉೂರುಗಳ ಹೆಸರುಗಳು ಅಲ್ಲಿನ ನಿವಾಸಿಗಳ ಭಾವನಾತ್ಮಕ ಅಂಶವಾಗಿದ್ದು, ಅವರ ಭಾವನೆಗಳಿಗೆ ಧಕ್ಕೆ  ತರುವ ಪ್ರಯತ್ನ ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com