ಡೆಲ್ಟಾ ಪ್ಲಸ್ ಆತಂಕ: ಮಹಾರಾಷ್ಟ್ರದಿಂದ ಬರುವವರಿಗೆ ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ ಲಸಿಕೆ ಪ್ರಮಾಣಪತ್ರ ಕಡ್ಡಾಯ!

ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ವೈರಾಣುವಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ ರಾಜ್ಯದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 72 ಗಂಟೆಯೊಳಗಿನ ಆರ್'ಟಿ-ಪಿಸಿಆರ್ ವರದಿ ಅಥವಾ 1 ಡೋಸ್ ಕೋವಿಡ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ವೈರಾಣುವಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ ರಾಜ್ಯದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 72 ಗಂಟೆಯೊಳಗಿನ ಆರ್'ಟಿ-ಪಿಸಿಆರ್ ವರದಿ ಅಥವಾ 1 ಡೋಸ್ ಕೋವಿಡ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.      

ಮಹಾರಾಷ್ಟ್ರದಿಂದ ಬಸ್, ರೈಲು, ವಿಮಾನ, ಟ್ಯಾಕ್ಸಿ ಅಥವಾ ವೈಯಕ್ತಿಕ ವಾಹನಗಳಲ್ಲಿ ಕರ್ನಾಟಕ ಪ್ರವೇಶಿಸುವವರು 72 ಗಂಟೆಯೊಳಗಿನ ಆರ್'ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಕನಿಷ್ಠ ಒಂದು ಡೋಸ್ ಪಡೆದಿರುವ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. 

ವಿಮಾನಯಾನ ಸಂಸ್ಥೆಗಳು ಬೋರ್ಡಿಂಗ್ ಪಾಸ್ ನೀಡುವಾಗ ಮತ್ತು ರೈಲ್ವೇ ಅಧಿಕಾರಿಗಳು ಪ್ರಯಾಣ ಸಂದರ್ಭದಲ್ಲಿ ಈ ಬಗ್ಗೆ ಖಚಿತ ಮಾಡಿಕೊಳ್ಳಬೇಕು. ಬಸ್ ಪ್ರಯಾಣಿಕರಿಗೆ ಕಂಡಕ್ಟರ್ ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ, ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಗಳು ರಸ್ತೆಯ ಮೂಲಕ ಪ್ರಯಾಣಿಸುವವರು ಕೋವಿಡ್ ವರದಿ ಮತ್ತು ಪ್ರಮಾಣ ಪತ್ರವನ್ನು ಪರಿಶೀಲಿಸಲು ಚೆಕ್ ಪೋಸ್ಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. 

ಕನಿಷ್ಟ ಪಕ್ಷ ಒಂದು ಡೋಸ್ ಪಡೆದಿರುವ ಪ್ರಮಾಣ ಪತ್ರ ಹೊಂದಿರುವವರು, ಸಾಂವಿಧಾನಿಕ ಹುದ್ದೆಯಲ್ಲಿರುವವರು ಮತ್ತು ಆರೋಗ್ಯ ಕಾಳಜಿ ವೃತ್ತಿಪರರು, 2 ವರ್ಷ ಕೆಳಗಿನ ಮಕ್ಕಳು, ಕುಟುಂಬದಲ್ಲಿ ಸಾವು, ವೈದ್ಯಕೀಯ ತುರ್ತು ಅಗತ್ಯಗಳಿದ್ದವರಿಗೆ ಕಡ್ಡಾಯ ಆರ್'ಟಿಪಿಸಿಆರ್ ವರದಿ ಮತ್ತು ಲಸಿಕೆ ಪ್ರಮಾಣಪತ್ರ ನೀಡುವುದರಿಂದ ವಿನಾಯಿತಿ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com