ಮಂಗಳೂರು: ಲಸಿಕೆ ಕೊಡಿಸುವುದಾಗಿ ರಾತ್ರೋ ರಾತ್ರಿ 50 ಮಹಿಳೆಯರ ಸಾಗಾಟ, ಪ್ರಕರಣ ದಾಖಲು

ಕೊರೋನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಕೊರೋನಾ ಲಸಿಕೆ ಕೊಡಿಸುವುದಾಗಿ ಹೇಳಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲೂಕಿನ ಕಾರ್ನಾಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಂಗಳೂರು ಹೊರವಲಯದ ಕಣಚೂರು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಕೊಡಿಸುವುದಾಗಿ ಹೇಳಿ ಸುಮಾರು 40-50 ಮಹಿಳೆಯರನ್ನು ತಡರಾತ್ರಿ ಕಾಲೇಜು ಬಸ್​ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು ಎಂದು ಹೇಳಲಾಗುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ಕಣಚೂರು ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆ, ಕಾಲೇಜಿನ ಬಸ್​ನಲ್ಲಿ ಎಲ್ಲಾ ಮಹಿಳೆಯರನ್ನು ಕರೆದೊಯ್ಯಲಾಗುತ್ತಿತ್ತು. ಆದರೆ, ಇದನ್ನು ಗಮನಿಸಿದ ಊರಿನ ಬೇರೆ ಗ್ರಾಮಸ್ಥರು ಅನುಮಾನಗೊಂಡು ಪ್ರಶ್ನೆ ಮಾಡಿದಾಗ ತಬ್ಬಿಬ್ಬಾದ ಬಸ್ ಚಾಲಕ ಹಾಗೂ ನರ್ಸ್ ಉತ್ತರ ಕೊಡಲು ತಡಬಡಾಯಿಸಿದ್ದಾರೆ. 

ಊರಿನವರು ಪ್ರಶ್ನೆ ಮಾಡಿದಾಗ ಕಣಚೂರು ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯ ನಿರ್ದೇಶಕ ಅಬ್ದುಲ್ ರೆಹಮಾನ್ ಮಾತನಾಡಿ, ಮಹಿಳೆಯರನ್ನು ಲಸಿಕೆ ನೀಡಲು ಕರೆದೊಯ್ಯಲಾಗುತ್ತಿದೆ ಎಂದು ಹೇಳಿದ್ದಾರೆ. ಸೋಮವಾರ ಬೆಳಿಗ್ಗೆ ಸಿಬ್ಬಂದಿಗಳನ್ನು ಕರೆದೊಯ್ಯಲು ಬಸ್ ಗಳನ್ನು ಬಳಕೆ ಮಾಡಲಾಗಿತ್ತು. ಲಸಿಕೆ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಭಾನುವಾರ ರಾತ್ರಿ ಲಸಿಕೆ ಕೊಡಲು ಕರೆದೊಯ್ಯಲಾಗುತ್ತಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ಊರಿನವರಿಗೆ ಮತ್ತಷ್ಟು ಅನುಮಾನ ಮೂಡಿದ್ದು, ತಡರಾತ್ರಿ ಯಾವ ಕೊರೊನಾ ಲಸಿಕೆ ಕೊಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಗ್ರಾಮಸ್ಥರು ದೂರಿನ ಆಧಾರದ ಮೇಲೆ ಪ್ರಕರಣವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com