ಒಡಿಯಾ ಕವಿ ಡಾ. ರಾಜೇಂದ್ರ ಕಿಶೋರ್ ಪಂಡಾಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ

ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪ್ರತಿಷ್ಠಾನ  ಒಡಿಶಾ ಕವಿ ಡಾ.ರಾಜೇಂದ್ರ ಕಿಶೋರ್ ಪಂಡಾ ಅವರನ್ನು  2020 ರ ಕುವೆಂಪು ರಾಷ್ಟ್ರೀಯ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ರಾಜೇಂದ್ರ ಕಿಶೋರ್ ಪಂಡಾ
ರಾಜೇಂದ್ರ ಕಿಶೋರ್ ಪಂಡಾ
Updated on

ಬೆಂಗಳೂರು: ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪ್ರತಿಷ್ಠಾನ  ಒಡಿಶಾ ಕವಿ ಡಾ.ರಾಜೇಂದ್ರ ಕಿಶೋರ್ ಪಂಡಾ ಅವರನ್ನು  2020 ರ ಕುವೆಂಪು ರಾಷ್ಟ್ರೀಯ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಕನ್ನಡದ ಹೆಮ್ಮೆಯ ರಾಷ್ಟ್ರಕವಿ ಕುವೆಂಪು ನೆನಪಿಗಾಗಿ ಸ್ಥಾಪಿಸಲಾದ ರಾಷ್ಟ್ರೀಯ ಪ್ರಶಸ್ತಿ ಇದಾಗಿದ್ದು 5 ಲಕ್ಷ ರೂ. ನಗದು ಪ್ರಶಸ್ತಿ ಫಲಕ,  ಬೆಳ್ಳಿ ಪದಕಗಳನ್ನು ಒಳಗೊಂಡಿರಲಿದೆ.

ಕನ್ನಡ ಕವಿ ಡಾ.ಎಚ್.ಎಸ್.ಶಿವಪ್ರಕಾಶ್, ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ಮತ್ತು ಬಂಗಾಳಿ ಲೇಖಕ ಶ್ಯಾಮಲ್ ಭಟ್ಟಾಚಾರ್ಯ ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯು ಪಂಡಾ  ಅವರ ಹೆಸರನ್ನು ಅಂತಿಮಗೊಳಿಸಿದೆ. ಸಮಿತಿಯು ಪ್ರೊಫೆಸರ್ ಹಂಪ ನಾಗರಾಜಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಡಾ. ಪಂಡಾ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.

ಭಾರತದ ಸಂವಿಧಾನದಲ್ಲಿ ಮಾನ್ಯತೆ ಪಡೆದ ಯಾವುದೇ ಭಾಷೆಗಳಿಗೆ ಕೊಡುಗೆ ನೀಡಿದ ಬರಹಗಾರನಿಗೆ ಈ ಪ್ರಶಸ್ತಿಯನ್ನು ವಾರ್ಷಿಕವಾಗಿ ನೀಡಲಾಗುತ್ತದೆ. ಅವರ ಜನ್ಮ ವರ್ಷಾಚರಣೆಯ ನೆನಪಿಗಾಗಿ ಡಿಸೆಂಬರ್ 29 ರಂದು ಶಿವಮೊಗ್ಗ ಜಿಲ್ಲೆಯ ಕುವೆಂಪು ಅವರ ಜನ್ಮಸ್ಥಳವಾದ ಕುಪ್ಪಳ್ಳಿಯಲ್ಲಿ ಪ್ರಶಸ್ತಿಯನ್ನು ನೀಡಡಲಾಗುವುದು ಆದರೆ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ 2020ರಲ್ಲಿ ಪ್ರಶಸ್ತಿ ಘೋಷಣೆ ಮುಂದೂಡಿಕೆಯಾಗಿತ್ತು.

1944 ರಲ್ಲಿ ಜನಿಸಿದ ಡಾ. ಪಂಡಾ ಒಡಿಶಾದ ಕವಿ ಮತ್ತು ಕಾದಂಬರಿಕಾರ. ಅವರು 16 ಕವನ ಸಂಕಲನ ಮತ್ತು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರಿಗೆ 2010 ರಲ್ಲಿ ಗಂಗಾಧರ್ ಪ್ರಶಸ್ತಿ ಮತ್ತು 1985 ರಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com