ರಾಜ್ಯದಲ್ಲಿ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿ ರಚನೆಗೆ ನಿರ್ಧಾರ!

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಸಮಾಲೋಚನೆ ಸಭೆ ನಡೆದಿದ್ದು, ಮೂರನೇ ಅಲೆ ಬರಲಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಸಮಾಲೋಚನೆ ಸಭೆ ನಡೆದಿದ್ದು, ಮೂರನೇ ಅಲೆ ಬರಲಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.

ಕೋವಿಡ್ ಲಸಿಕೆಯನ್ನು ಹಾಕುವ ವೇಗವನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವುದು. ಹಾಸಿಗೆ ಹೆಚ್ಚಳ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿಲ್ಲದ ರೋಗ ಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದು, ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಉಳಿದ ಲಕ್ಷಣರಹಿತ ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರೆಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯವನ್ನು ಬಲಪಡಿಸುವ ಜೊತೆ ಮತ್ತಿತ್ತರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.

ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ಬಳಸಿಕೊಂಡು ಹೋಟೆಲ್ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್ ಡೌನ್ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಬೇಕು. ಸೆಂಟ್ರಲೈಜ್ಡ್ ಆಕ್ಸಿಜನೇಷನ್ ವ್ಯವಸ್ಥೆ ಇರುವ ಬೆಡ್ಗಳನ್ನು ಐ.ಸಿ.ಯು. ಬೆಡ್ಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು. 

ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕಗಳನ್ನು ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವುದು. ಇದಕ್ಕೆ ಸಹಕಾರಿಯಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮತ್ತು ಸೂಚನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com