ಕಾಂಗ್ರೆಸ್ ಕೇರ್ಸ್: ಕೊರೋನಾ ಸೋಂಕಿತರಿಗೆ ನೆರವಾಗಲು 'ಕೈ' ನಾಯಕರಿಂದ ಆ್ಯಂಬುಲೆನ್ಸ್ ಸೇವೆ ಆರಂಭ

ಕೊರೋನಾ ಸೋಂಕಿತರಿಗೆ ಸಹಾಯಕ್ಕಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೇವೆ ನೀಡಲು ಕಾಂಗ್ರೆಸ್ ಕೇರ್ಸ್ ಹೆಸರಿನಲ್ಲಿ ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. 
ಕಾಂಗ್ರೆಸ್ ನಿಂದ ನಗರದಲ್ಲಿ ಆ್ಯಂಬುಲೆನ್ಸ್ ಸೇವೆ
ಕಾಂಗ್ರೆಸ್ ನಿಂದ ನಗರದಲ್ಲಿ ಆ್ಯಂಬುಲೆನ್ಸ್ ಸೇವೆ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಸಹಾಯಕ್ಕಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೇವೆ ನೀಡಲು ಕಾಂಗ್ರೆಸ್ ಕೇರ್ಸ್ ಹೆಸರಿನಲ್ಲಿ ನಗರದಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. 

ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸರ್ಕಾರ ನೀಡಿರುವ ಸಹಾಯವಾಣಿಗೆ ಕರೆ ಮಾಡಿದರೆ ಯಾರೂ ಸ್ವೀಕರಿಸುತ್ತಿಲ್ಲ. ಕಾಂಗ್ರೆಸ್ ಸಹಾಯವಾಣಿಗೆ ಈ ವರೆಗೆ 3 ಸಾವಿರಕ್ಕೂ ಹೆಚ್ಚು ಮಂದಿ ಕರೆ ಮಾಡಿದ್ದಾರೆ. 100ಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆಗೆ ದಾಖಲಾಗಲು ನಾವು ನೆರವಾಗಿದ್ದೇವೆ. 300ಕ್ಕೂ ಹೆಚ್ಚು ಮಂದಿ ಸೋಂಕಿತರಿಗೆ ವೈದ್ಯರ ಸಂದರ್ಶನಕ್ಕೆ ಅವಕಾಶ ಕೊಡಿಸಿ ಔಷಧ ವಿತರಿಸಿದ್ದೇವೆ. ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸಹಾಯವಾಣಿ ಪ್ರಾಂರಭಿಸಲು ಪಕ್ಷದ ಮುಖಂಡರಿಗೆ ನಿರ್ದೇಶನ ನೀಡಿದ್ದೇವೆ. ಈ ಸಮಯದಲ್ಲಿ ಎಷ್ಟೇ ಕಷ್ಟವಾದರೂ ಜನರ ಜೊತೆ ಇರಲು ನಿರ್ಧರಿಸಿದ್ದೇವೆಂದು ಹೇಳಿದರು. 

ಕೇಂದ್ರ ಸರ್ಕಾರ ಹಾಗೂ ರಾಜ್ಯ ಮುಖ್ಯಮಂತ್ರಿಗಳಿಂದ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಆದರೂ ತಮ್ಮ ವೈಫಲ್ಯವನ್ನು ಒಪ್ಪಿಕೊಳ್ಳಲು ಅವರು ಸಿದ್ಧರಿಲ್ಲ. ಹೀಗಾಗಿ ನಾವೇ ಮುಂದೆ ಬಂದಿದ್ದೇವೆ. ಜೊತೆಗೆ ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಗುರಿಯಾಗಿರುವವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಲು ಒತ್ತಾಯಿಸುತ್ತೇವೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com