ಗಂಗೂಬಾಯಿ ಹಾನಗಲ್ ಮೊಮ್ಮಗಳು ಕೊರೋನಾಗೆ ಬಲಿ, ಐಸಿಯುವಿನಲ್ಲಿ ಪುತ್ರನಿಗೆ ಚಿಕಿತ್ಸೆ

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳು ಮಹಾಮಾರಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಪುತ್ರ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹುಬ್ಬಳ್ಳಿ: ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳು ಮಹಾಮಾರಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಪುತ್ರ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳು ಮಾಧವಿ ಜೋಶಿಯವರು ಕೊರೋನಾದಿಂದ ಪುಣೆಯಲ್ಲಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

ಗಂಗೂಬಾಯಿ ಹಾನಗಲ್ ಅವರ ಕುಟುಂಬದ ಇಬ್ಬರು ಸದಸ್ಯರು ಈ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಗುಂಗೂಬಾಯಿ ಅವರ ಪುತ್ರ ಬಾಬೂರಾವ್ ಹಾನಗಲ್ ಹಾಗೂ ಅವರ ಮೊಮ್ಮಗ ಅರುಣ್ ಹಾನಗಲ್ ಕೊರೋನಾ ಸೋಂಕಿಗೊಳಗಾಗಿದ್ದರು. 

ಕಳೆದ ವಾರ ಮಾಧವಿ ಜೋಶಿ (55) ಅವರಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಅವರನ್ನು ಮಹಾರಾಷ್ಟ್ರದ ಪುಣೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಸೋಮವಾರ ಅವರಲ್ಲಿ ಅತೀವ್ರ ಉಸಿರಾಟ ಸಮಸ್ಯೆ ಶುರುವಾಗಿ, ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ಇನ್ನು ಗಂಗೂಬಾಯಿ ಹಾನಗಲ್ ಅವರ ಪುತ್ರ ಬಾಬುರಾವ್ (90) ಅವರ ಸ್ಥಿತಿ ಕೂಡ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಆಕ್ಸಿಜನ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 

ಇನ್ನು ಸೋಂಕಿಗೊಳಗಾಗಿರುವ ಅರುಣ್ ಹಾನಗಲ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com