ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋವಿಡ್-19: ರಾಜ್ಯದಲ್ಲಿ ಸಾವಿನ ಸಂಖ್ಯೆ ಹೆಚ್ಚಳದ ಜೊತೆಗೆ ಗುಣಮುಖರ ಪ್ರಮಾಣವೂ ಏರಿಕೆ!

ರಾಜ್ಯದಲ್ಲಿ ಒಂದೆಡೆ ಕೊರೋನಾ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ತಾರಕಕ್ಕೇರುತ್ತಿದ್ದರೂ ಕೋವಿಡ್ ನಿಂದ ಗುಣಮುಖರಾದ ಸಂಖ್ಯೆಯೂ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ತುಸು ನೆಮ್ಮದಿಯನ್ನು ನೀಡಿದೆ. 

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೋನಾ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ತಾರಕಕ್ಕೇರುತ್ತಿದ್ದರೂ ಕೋವಿಡ್ ನಿಂದ ಗುಣಮುಖರಾದ ಸಂಖ್ಯೆಯೂ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ತುಸು ನೆಮ್ಮದಿಯನ್ನು ನೀಡಿದೆ. 

ರಾಜ್ಯದಲ್ಲಿ ಮಂಗಳವಾರ ಒಂದೇ ದಿನ ದಾಖಲೆಯ 24,714 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. 

ಮೇ.2 ರಂದು 21,149 ಮಂದಿ ಗುಣಮುಖರಾಗಿದ್ದು ದಾಖಲೆಯಾಗಿತ್ತು. ಕಳೆದ 3 ದಿನಗಳಿಂದ ಸತತ 20 ಸಾವಿರಕ್ಕಿಂತ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಕಳೆದ 5 ದಿನಗಳಲ್ಲಿ ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಸೇ.71.55ರಿಂದ ಶೇ.71.99ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರು ನಗರ ಒಂದರಲ್ಲಿಯೇ ನಿನ್ನೆ 13,946 ಮಂದಿ ಗುಣಮುಖರಾಗಿದ್ದು, ನಗರದಲ್ಲಿ ಚೇತರಿಕೆ ಪ್ರಮಾಣ ಶೇ.63.18ರಿಂದ ಶೇ.63.27ಕ್ಕೆ ಏರಿಕೆಯಾಗಿದೆ. 

ಇನ್ನು ರಾಜ್ಯದಲ್ಲಿ ಕೊರೋನಾಗೆ ಬಲಿಯಾಗುತ್ತಿರುವ ಸಂಖ್ಯೆ ಕೂಡ ಹೆಚ್ಚಾಗುತ್ತಲೇ ಇದ್ದು,  ನಿನ್ನೆ ಒಂದೇ ದಿನ 292 ಮಂದಿ ಸಾವನ್ನಪ್ಪಿದ್ದಾರೆ. ಮೇ. 1 ರಂದು 271 ಮಂದಿ ಮೃತರಾಗಿದ್ದು, ಈ ವರೆಗಿನ ದಾಖಲೆಯಾಗಿತ್ತು. ಇದಾದ ಬಳಿಕ ಏಪ್ರಿಲ್ 29 ರಂದು 270 ಮಂದಿ ಸಾವನ್ನಪ್ಪಿದ್ದರು. ಆದರೂ ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ.1ಕ್ಕಿಂತ ಕಡಿಮೆ ಶೇ.0.97ರಷ್ಟಿದೆ. 

Related Stories

No stories found.

Advertisement

X
Kannada Prabha
www.kannadaprabha.com