ಸಚಿವ ಜಗದೀಶ್ ಶೆಟ್ಟರ್
ಸಚಿವ ಜಗದೀಶ್ ಶೆಟ್ಟರ್

ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್: ಶೀಘ್ರ ಸಮಸ್ಯೆಗೆ ಪರಿಹಾರ- ಸಚಿವ ಜಗದೀಶ್ ಶೆಟ್ಟರ್

ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ  ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ  ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ರಾಜ್ಯದ ಆಕ್ಸಿಜನ್ ಪೂರೈಕೆ ಉಸ್ತುವಾರಿ ವಹಿಸಿಕೊಂಡಿರುವ  ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಇಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಅವರು,ಕೊಲ್ಲಾಪುರದಿಂದ ಬೆಳಗಾವಿ ಜಿಲ್ಲೆಗೆ ಪೂರೈಕೆಯಾಗುತ್ತಿದ್ದ 20 ಕೆ.ಎಲ್. ಆಕ್ಸಿಜನ್ ಪೂರೈಕೆ ನಿರ್ಬಂಧ ವಿಧಿಸಿದ್ದರೆ ಆಕ್ಸಿಜನ್ ಮರುಹಂಚಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಜತೆ ಚರ್ಚೆ ನಡೆಸಲಾಗುವುದು ಎಂದರು.

ಬಳ್ಳಾರಿಯಿಂದ ಮಹಾರಾಷ್ಟ್ರಕ್ಕೆ ಹಂಚಿಕೆಯಾಗಿದ್ದ ಆಕ್ಸಿಜನ್ ಪ್ರಮಾಣವನ್ನು ಕರ್ನಾಟಕ ರಾಜ್ಯಕ್ಕೆ ಮರುಹಂಚಿಕೆಯಾಗಿರುವುದರಿಂದ ಈ ಕುರಿತು ಅಲ್ಲಿನ ಸರಕಾರದ ಜತೆ ಚರ್ಚಿಸಲಾಗುವುದು, ಕೇಂದ್ರ ಸರಕಾರ ಕೂಡ ಟ್ಯಾಂಕರ್ ನೀಡಲಿದ್ದು, ಅದರಲ್ಲಿ ಬೆಳಗಾವಿ
ಜಿಲ್ಲೆಗೆ ಒಂದು ಟ್ಯಾಂಕರ್ ಮೀಸಲಿಡಲಾಗುವುದು ಎಂದು ಸಚಿವರು ತಿಳಿಸಿದರು.

ಹೋಮ್ ಐಸೋಲೇಷನ್ ಇರುವವರಿಗೆ ಸರಿಯಾಗಿ ಔಷಧಿ ಕಿಟ್ ನೀಡುವುದರ ಜತೆಗೆ ಯಾವ ರೀತಿ ಮನೆಯಲ್ಲಿ ಆರೈಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಆರೋಗ್ಯ ಇಲಾಖೆಯ ತಂಡಗಳು ತಿಳಿವಳಿಕೆ ನೀಡಬೇಕು, ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್ ಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಒಂದು ವೇಳೆ ತಾಲ್ಲೂಕು ಕೇಂದ್ರಗಳಲ್ಲಿ ಬಳಕೆ ಮಾಡಲು ಸಾಧ್ಯವಾಗದಿದ್ದರೆ ಅಂತಹ ವೆಂಟಿಲೇಟರ್ ಗಳನ್ನು ಜಿಲ್ಲಾಸ್ಪತ್ರೆಗಳಲ್ಲಿ ಬಳಕೆ ಕುರಿತು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸೋಂಕು ತಪಾಸಣೆಗೆ ಮಾದರಿಯನ್ನು ಸಂಗ್ರಹಿಸಿದ ನಂತರ ಆದಷ್ಟು ಬೇಗನೇ ತಪಾಸಣಾ ವರದಿ ನೀಡಬೇಕು. ಇದರಿಂದ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವುದು ಸಾಧ್ಯವಾಗಲಿದೆ.ಆದ್ದರಿಂದ  ಸಾಧ್ಯವಾದರೆ 24 ಗಂಟೆಯೊಳಗೆ ವರದಿ ನೀಡಲು ಕ್ರಮವಹಿಸಬೇಕು ಎಂದು  ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಬಿಮ್ಸ್ ನಲ್ಲಿ ಅಗತ್ಯವಿರುವ ವೈದ್ಯರು, ತಂತ್ರಜ್ಞರು ಹಾಗೂ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಸರಕಾರ ಈಗಾಗಲೇ ಅನುಮತಿ ನೀಡಿರುತ್ತದೆ. ಆದ್ದರಿಂದ ‌ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.ಬಿಮ್ಸ್ ಗೆ ಇನ್ನೂ ಹೆಚ್ಚಿನ ಆಕ್ಸಿಜನ್ ಹಾಗೂ ಸಿಬ್ಬಂದಿ ಒದಗಿಸಿದರೆ ಗರಿಷ್ಠ 822 ಬೆಡ್ ಗಳನ್ನು  ಒದಗಿಸಬಹುದು. ಇದರಿಂದ ಸಮಸ್ಯೆಯನ್ನು ಪರಿಹರಿಸಬಹುದು ಎಂದು ತಿಳಿಸಿದರು.
 

Related Stories

No stories found.

Advertisement

X
Kannada Prabha
www.kannadaprabha.com