ರಾಜ್ಯ

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ.ಮಂಜುನಾಥ್ ಕೊರೋನಾದಿಂದ ನಿಧನ

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಿ.ಮಂಜುನಾಥ್ ಕೊರೋನಾದಿಂದ ನಿಧನ
ಡಿ ಮಂಜುನಾಥ್
Published On :

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತುಮಕೂರು ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಡಿ.ಮಂಜುನಾಥ್ ರವರು ಕೋವಿಡ್ ಸೋಂಕಿನಿಂದಾಗಿ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಂಜುನಾಥ್ ಅವರು ಮೂಲತಃ ದೊಡ್ಡಬಳ್ಳಾಪುರದ ನೆಲಕುಂಟೆಯವರಾಗಿದ್ದು ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು.

ಸಂಜೆವಾಣಿ, ಕರುನಾಡ ಸಂಜೆ, ಇಂದು ಸಂಜೆ, ವಾರ್ತಾಭಾರತಿ  ಸೇರಿ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಮಂಜುನಾಥ್ ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ/

ಮಂಜುನಾಥ್ ಅವರ ನಿಧನಕ್ಕೆ  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂತಾಪ ಸೂಚಿಸಿದೆ. "ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತುಮಕೂರು ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಶ್ರೀ ಡಿ.ಮಂಜುನಾಥ್ ರವರು ಕೋವಿಡ್ ಸೋಂಕಿನಿಂದಾಗಿ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಈ ಕುರಿತು ಇಲಾಖೆಯು ತೀವ್ರ ಸಂತಾಪ ವ್ಯಕ್ತಪಡಿಸಿದೆ." ಎಂದು ಟ್ವೀಟ್ ಮಾಡಲಾಗಿದೆ.

ಅಗಲಿದ ಮಂಜುನಾಥ್ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮದಲ್ಲಿ ಕೋವಿಡ್ ನಿಯಮಾನುಸಾರ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.