ಸ್ವಕ್ಷೇತ್ರದಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ಸಚಿವ ಎಸ್.ಟಿ.ಸೋಮಶೇಖರ್!

ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ಧನವನ್ನು ವೈಯಕ್ತಿಕವಾಗಿ ಭರಿಸುತ್ತಿದ್ದಾರೆ.
ಸಚಿವ ಎಸ್. ಟಿ. ಸೋಮಶೇಖರ್ ಮತ್ತಿತರರು
ಸಚಿವ ಎಸ್. ಟಿ. ಸೋಮಶೇಖರ್ ಮತ್ತಿತರರು
Updated on

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ  ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ಧನವನ್ನು ವೈಯಕ್ತಿಕವಾಗಿ ಭರಿಸುತ್ತಿದ್ದಾರೆ.

ರಾಮುಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಹಾಮಾರಿ ಕೊರೋನಾ ಸೋಂಕಿನಿಂದ ಮೃತಪಟ್ಟ 9 ಮೃತರ ಕುಟುಂಬಗಳು ಹಾಗೂ ಚುಂಚನಕುಪ್ಪೆ ಗ್ರಾಮ ಪಂಚಾಯಿತಿಯ 2 ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ಪರಿಹಾರ ಧನವನ್ನು ಇಂದು ವಿತರಿಸಿದರು.

ಕೋವಿಡ್-19 ನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ಒಂದು ಲಕ್ಷ ಪರಿಹಾರ ಸಹಾಯ ಧನ ವಿತರಣಾ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ  ಕ್ಷೇತ್ರದ  ನಿರ್ಮಲಾನಂದನಾಥ ಸ್ವಾಮೀಜಿ ನಿನ್ನೆ ಚಾಲನೆ ನೀಡಿದ್ದರು.

ಜನತೆಯ ಸೇವಕನಾಗಿ ಅವರ ಅವಶ್ಯಕತೆಗಳನ್ನು ಪೂರೈಸುವುದು ನನ್ನ ಕರ್ತವ್ಯ.ಹೀಗಾಗಿ ನನ್ನ ಕ್ಷೇತ್ರದಲ್ಲಿ ಕೋವಿಡ್‍ನಿಂದ ಮೃತಪಟ್ಟ ಕುಟುಂಬದವರಿಗೆ ತಲಾ 1 ಲಕ್ಷ ರೂಪಾಯಿ  ಪರಿಹಾರ ಸಹಾಯಧನವನ್ನು ವೈಯುಕ್ತಿಕವಾಗಿ ನೀಡುವ ವ್ಯವಸ್ಥೆ ಮಾಡಿದ್ದು, ಆಸ್ಪತ್ರೆಗೆ ದಾಖಲಾದವರಿಗೂ 25, 50 ಸಾವಿರ ಸಹಾಯ ಧನ ನೀಡುವುದಾಗಿಯೂ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com