ತರೀಕೆರೆ/ಚಾಮರಾಜನಗರ: ಕೊರೋನಾ ಭಯದಿಂದ ಮಾಜಿ ಉಪ ತಹಶೀಲ್ದಾರ್ ಒಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನಡೆದಿದೆ.
ಮೃತರನ್ನು ಸೋಮನಾಯಕ್ ಎಂದು ಗುರುತಿಸಲಾಗಿದೆ.
ತರೀಕೆರೆಯ ಬೇಲೇನಹಳ್ಳಿ ತಾಂಡಾ ನಿವಾಸಿಯಾಗಿದ್ದ ಸೋಮನಾಯಕ್ ತಮ್ಮ ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸಂಬಂಧ ತರೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೊರೋನಾಗೆ ಬಲಿ
ಚಾಮರಾಜನಗರ ಜಿಲ್ಲಾ ಕ್ರೀಡಾ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಚೆಲುವಯ್ಯ ಅವರು ಕೊರೋನಾದಿಂದ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.
ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಚೆಲುವಯ್ಯ ಸಂತೆ ಮರಳ್ಳಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಹೆಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಚೆಲುವಯ್ಯ ಅಸುನೀಗಿದ್ದಾರೆ.
Advertisement