ಆಕ್ಸಿಜನ್ ಕೊರತೆ: ಚಾಮರಾಜನಗರ ಸರ್ಕಾರಿ ಅಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವು!

ಮೇ 2ರ ದುರಂತದಿಂದಾಗಿ ತೀವ್ರ ಆತಂಕಕ್ಕೆ ಒಳಗಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್‌ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಮೇ 2ರ ದುರಂತದಿಂದಾಗಿ ತೀವ್ರ ಆತಂಕಕ್ಕೆ ಒಳಗಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್‌ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. 

ಭಾನುವಾರ ಒಂದೇ ದಿನ 15 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಕೋವಿಡೇತರ ರೋಗಿಗಳು ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿದ್ದ ಐವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. 

ಇನ್ನು ಕರ್ನಾಟಕ ಲೋಕಾಯುಕ್ತ ಕೂಡ ಈ ಹಿಂದೆ ಸಂಭವಿಸದ 24 ಮಂದಿ ಸಾವಿನ ದುರಂತ ಪ್ರಕರಣವನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ. 

ಚಾಮರಾಜನಗರ ಜಿಲ್ಲೆಯಲ್ಲಿ ಭಾನುವಾರ ಒಂದೇ 930 ಹೊಸ ಸೋಂಕು ಪ್ರಕರಣ ಪತ್ತೆಯಾಗಿದ್ದು, 561 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇದೀಗ 4,748 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ. ಇದಲ್ಲದೆ, ಜಿಲ್ಲೆಯಲ್ಲಿ ಭಾನುವಾರ ನಡೆಸಿದ 2,553 ಕೊರೋನಾ ಪರೀಕ್ಷೆಯಲ್ಲಿ ಶೇ.36ರಷ್ಟು ಮಂದಿಯಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ. 

ಜಿಲ್ಲೆಯಲ್ಲಿ ಸೋಂಕು ವ್ಯಾಪಕಗೊಳ್ಳುತ್ತಿರುವುದು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ. ಆಶ್ಚರ್ಯಕರ ವಿಚಾರವೆಂದರೆ ಸಾರಿಗೆ ಸಂಪರ್ಕ ಇಲ್ಲದಿದ್ದರೂ, ಹೊರಗಿನವರ ಸಂಪರ್ಕ ಇಲ್ಲದಿದ್ದರೂ ಜಿಲ್ಲೆಯಲ್ಲಿರುವ 2 ಕುಗ್ರಾಮಗಳಲ್ಲಿ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಈ ಬೆಳವಣಿಗೆ ಇದೀಗ ಬುಡಕಟ್ಟು ಜನಾಂಗದವರಲ್ಲೂ ಆತಂಕ ಹುಟ್ಟಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com