
ಬೆಂಗಳೂರು: ರೆಮಿಡಿಸಿವರ್ ಔಷಧಗಳ ಕೊರತೆಯಿಂದ ರೋಗಿಗಳು ಸಮಸ್ಯೆ ಅನುಭವಿಸುತ್ತಿರುವ ಮಧ್ಯೆಯೇ ರೆಮ್ಡೆಸೆವಿರ್ ಅಕ್ರಮವಾಗಿ ಮಾರಾಟಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇನ್ನು ಅಕ್ರಮ ರೆಮ್ಡೆಸೆವಿರ್ ಮಾರಾಟಗಾರರನ್ನು ಹೆಡೆಮುರಿ ಕಟ್ಟುತ್ತಿರುವ ಸಿಸಿಬಿ ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳಿಂ 8 ರೆಮ್ಡೆಸೆವಿರ್ ಇಂಜೆಕ್ಷನ್ ವಯಲ್ ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಔಷಧ ಹಾಗೂ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಇಬ್ಬರು ಆರೋಪಿಗಳ ಪೈಕಿ ಓರ್ವ ನಗರ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮತ್ತೊಬ್ಬ ಆ್ಯಂಬುಲೆನ್ಸ್ ಚಾಲಕನಾಗಿದ್ದಾನೆಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
Advertisement