ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ: ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್​ಡೌನ್​ ಜಾರಿ ಮಾಡಲಾಗಿದ್ದು, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಎಚ್ಚರಿಕೆ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್
ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್​ಡೌನ್​ ಜಾರಿ ಮಾಡಲಾಗಿದ್ದು, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಟ್ವಿಟರ್​​ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆಯುಕ್ತರು, ಓರ್ವ ವ್ಯಕ್ತಿಯನ್ನು ಸುತ್ತುವರೆದು ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು, ಮಹಿಳೆಯೊಬ್ಬರು ಕರ್ನಾಟಕ ಲಾಕ್​ಡೌನ್ ಸಮಯದಲ್ಲಿ ನಡೆದಿರುವ ಘಟನೆ ಎಂದು ಶೇರ್​ ಮಾಡಿದ್ದಾರೆ. ಆದರೆ, ಇದು ಕಳೆದ ವರ್ಷ ಏ.3 ರಂದು ಮುಂಬೈನಲ್ಲಿ ನಡೆದ ಘಟನೆ. ಇಂತಹ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಈ ರೀತಿ ಪ್ರಚೋದನಾತ್ಮಕ ಸುದ್ದಿಗಳಿಂದ ದಿಕ್ಕು ತಪ್ಪಬಾರದು.ಯಾವುದೇ ಸುದ್ದಿಯ ನೈಜತೆಯನ್ನು ಮೊದಲು ಪರಿಶೀಲಿಸಬೇಕು. ಸುದ್ದಿ ಪರಿಶೀಲಿಸಿ ಶೇರ್ ಮಾಡಿ ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com