ದುಃಖದಲ್ಲೂ ಕೋವಿಡ್ ಆಸ್ಪತ್ರೆ ಪ್ರಾರಂಭಿಸಿ ನೊಂದವರ ಕಣ್ಣೀರೊರೆಸಲು ಮುಂದಾದ ಡಿಸಿಎಂ ಸವದಿ

ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಅಣ್ಣನ ಮಗ ವಿನೋದ್ ಸವದಿ ಬುಧವಾರ ಕೊರೊನಾಗೆ ಬಲಿಯಾಗಿದ್ದು, ಇಡೀ ಕುಟುಂಬ ದುಃಖದಲ್ಲಿದೆ. ಈ ಮಧ್ಯೆ ತಮ್ಮ ಅಣ್ಣನ ಮಗನಿಗೆ ಉಂಟಾದ ಪರಿಸ್ಥಿತಿ ಬೇರೆಯವರಿಗೆ ಬರಬಾರದು ಎಂದು ಲಕ್ಷ್ಮಣ ಸವದಿ ಅವರು ಗುರುವಾರ ಅಥಣಿಯಲ್ಲಿ ಆಕ್ಸಿಜನ್ ಸೆಂಟರ್ ಮತ್ತು ಕೋವಿಡ್ ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸುವ ಕಾರ್ಯದಲ್ಲಿ ನಿರತರಾಗಿದ್ದು
ಕೋವಿಡ್ ಆಸ್ಪತ್ರೆ ಪ್ರಾರಂಭಿಸಿ ನೊಂದವರ ಕಣ್ಣೀರೊರೆಸಲು ಮುಂದಾದ ಡಿಸಿಎಂ ಸವದಿ
ಕೋವಿಡ್ ಆಸ್ಪತ್ರೆ ಪ್ರಾರಂಭಿಸಿ ನೊಂದವರ ಕಣ್ಣೀರೊರೆಸಲು ಮುಂದಾದ ಡಿಸಿಎಂ ಸವದಿ
Updated on

ಬೆಳಗಾವಿ:  ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಅಣ್ಣನ ಮಗ ವಿನೋದ್ ಸವದಿ ಬುಧವಾರ ಕೊರೊನಾಗೆ ಬಲಿಯಾಗಿದ್ದು, ಇಡೀ ಕುಟುಂಬ ದುಃಖದಲ್ಲಿದೆ. ಈ ಮಧ್ಯೆ ತಮ್ಮ ಅಣ್ಣನ ಮಗನಿಗೆ ಉಂಟಾದ ಪರಿಸ್ಥಿತಿ ಬೇರೆಯವರಿಗೆ ಬರಬಾರದು ಎಂದು ಲಕ್ಷ್ಮಣ ಸವದಿ ಅವರು ಗುರುವಾರ ಅಥಣಿಯಲ್ಲಿ ಆಕ್ಸಿಜನ್ ಸೆಂಟರ್ ಮತ್ತು ಕೋವಿಡ್ ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸುವ ಕಾರ್ಯದಲ್ಲಿ ನಿರತರಾಗಿದ್ದು, ನಾಳೆಯಿಂದಲೇ ಈ ಆಸ್ಪತ್ರೆ ಬಡವರ ಸೇವೆಗೆ ಲಭ್ಯವಾಗಲಿದೆ.

ಸುಮಾರು 50 ಲಕ್ಷ ರೂ. ವೆಚ್ಚ ಮಾಡಿ ತಮ್ಮ ಸ್ವಂತಃ ಖರ್ಚಿನಲ್ಲಿಯೇ ಈ ಆರೋಗ್ಯ ಸೇವೆಯನ್ನು ಕಲ್ಪಿಸುವ ಮೂಲಕ ನಿಧನಹೊಂದಿದ ತಮ್ಮ ಕುಟುಂಬದ ಕುಡಿಗೆ ಜನಸೇವೆಯ ಮೂಲಕವೇ ಅಶ್ರುತರ್ಪಣ ಸಲ್ಲಿಸಲು ಉಪಮುಖ್ಯಮಂತ್ರಿಗಳು ಮುಂದಾಗಿದ್ದಾರೆ. 

ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ನಾಳೆಯಿಂದ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಕೊರೊನಾ ಮಹಾಮಾರಿಯಿಂದಾಗಿ ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50 ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು ಈಗಾಗಲೇ ಖರೀದಿಸಿ ಇಲ್ಲಿ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ಕಾನ್ಸಟ್ರೇಟರ್ ಕಿಟ್ ಜೊತೆಗೆ ಜ್ವರ ಪರೀಕ್ಷೆ ಮಾಡುವ ಥರ್ಮಾಮೀಟರ್, ಸ್ಯಾಚುರೇಷನ್ ಹಾಗೂ ಪಲ್ಸ್ ಚೆಕ್ ಮಾಡುವ ಆಕ್ಸಮೀಟರ್ ಉಳ್ಳ ಕಿಟ್ ಗಳನ್ನು ಕೂಡ ನೀಡಲಾಗುತ್ತಿದೆ.

ಈ ಆಸ್ಪತ್ರೆಯಲ್ಲಿ ಉಚಿತ ಸೇವೆ ಕಲ್ಪಿಸುವುದರಿಂದ ವಿಶೇಷವಾಗಿ ಬಡವರು ಇದರ ಪ್ರಯೋಜನ ಪಡೆದುಕೊಳ್ಳುವಂತಾದರೆ ತಮ್ಮ ಶ್ರಮ ಸಾರ್ಥಕ. ಜನರ ನೋವು ನೀಗಿಸಲು ನಾವು ಪ್ರಯತ್ನಿಸಿದರೆ, ನಮ್ಮಲ್ಲಿನ ನೋವನ್ನು ಆ ಭಗವಂತನೇ ಪರಿಹರಿಸುತ್ತಾನೆ ಎಂಬುದಾಗಿ ಲಕ್ಷ್ಮಣ ಸವದಿ ಅವರು ಪ್ರತಿಕ್ರಿಯಿಸಿದ್ದಾರೆ.

ಕೊರೊನಾ ಸೋಂಕು ತಗುಲಿದೆ ಎಂದು ಉದಾಸೀನತೆ ತೋರದೆ ಕೂಡಲೇ ಚಿಕಿತ್ಸೆ ಪಡೆಯಬೇಕು. ಯಾರೊಬ್ಬರೂ ಧೈರ್ಯಬಿಡದೇ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದು ಅವರು ಜನತೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com