ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನರೇಗಾದಡಿ ಕೆಲಸಕ್ಕೆ ಸರ್ಕಾರ ಅನುಮತಿ, ಹೊಸ ನಿಯಮ ಜಾರಿ 

ಲಾಕ್ ಡೌನ್ ಸಮಯದಲ್ಲಿ ನರೇಗಾದಡಿ ಕೆಲಸ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.
Published on

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ನರೇಗಾದಡಿ ಕಾರ್ಮಿಕರಿಗೆ ಕೆಲಸ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.

ನರೇಗಾದಡಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿಗಳೊಂದಿಗೆ ಕೆಲಸ ಮಾಡುವ ಸ್ಥಳದಲ್ಲಿ 40ಕ್ಕಿಂತ ಹೆಚ್ಚು ಜನರು ಸೇರದಂತೆ ಸರ್ಕಾರ ಸೂಚಿಸಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ನರೇಗಾದಡಿ ಕೆಲಸ ನಿಲ್ಲಿಸಿದ್ದನ್ನು ಈ ಹಿಂದೆ ಸಾಮಾಜಿಕ ಕಾರ್ಯಕರ್ತರು ಮತ್ತು ದಿನಗೂಲಿ ನೌಕರರ ಒಕ್ಕೂಟ ಪ್ರಶ್ನಿಸಿತ್ತು. ಸರ್ಕಾರ ನಿರ್ಮಾಣ ಕೆಲಸಗಳಿಗೆ ಮತ್ತು ಬೆಂಗಳೂರು ಮೆಟ್ರೊ ರೈಲು ಕೆಲಸಕ್ಕೆ ಲಾಕ್ ಡೌನ್ ಸಮಯದಲ್ಲಿ ಅವಕಾಶ ನೀಡಿರುವಾಗ ನಗೇರಾದಡಿ ಕೆಲಸ ನಿಲ್ಲಿಸಿದ್ದೇಕೆ ಎಂದು ಕೇಳಿತ್ತು. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ವಲಸೆ ಕಾರ್ಮಿಕರಿಗೆ ನೆರವಾಗಬೇಕು ಎಂದು ಕೇಳಿಕೊಂಡಿದ್ದರು.

ಸರ್ಕಾರ ನಿರ್ಧಾರ ಮರು ಪರಿಶೀಲಿಸದಿದ್ದರೆ ಪ್ರತಿಭಟನೆ, ಧರಣಿ ನಡೆಸುವುದಾಗಿ ಕಾರ್ಯಕರ್ತ, ರಂಗ ನಿರ್ದೇಶಕ ಪ್ರಸನ್ನ ಕೂಡ ಎಚ್ಚರಿಕೆ ನೀಡಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ದಿನಗೂಲಿ ನೌಕರರಿಗೆ ಕೆಲಸ ನೀಡಬೇಕೆಂದು ಹೇಳಿದ್ದರು.

ಸರ್ಕಾರ ಮೇ 24ರವರೆಗೆ ಲಾಕ್ ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಅನೇಕ ವಲಸೆ ಕಾರ್ಮಿಕರು ತಮ್ಮ ಗ್ರಾಮಕ್ಕೆ ಹಿಂತಿರುಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com