ಸಿಲಿಕಾನ್ ಸಿಟಿಯಲ್ಲಿ 1,369 ಪೊಲೀಸ್ ಸಿಬ್ಬಂದಿಗೆ ಕೊರೋನಾ, 12 ಮಂದಿ ಬಲಿ

ನಗರದಲ್ಲಿ 1369 ಪೊಲೀಸ್ ಸಿಬ್ಬಂದಿ ಕೊರೋನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದರಲ್ಲಿ 12 ಜನ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರೂಪಾಂತರಿ ಕೊರೋನಾ ವೈರೆಸ್ ಎರಡನೇ ಅಲೆಗೆ ನಗರ ಪೊಲೀಸರು ಕೂಡ ತತ್ತರಿಸಿದ್ದಾರೆ.

ನಗರದಲ್ಲಿ 1369 ಪೊಲೀಸ್ ಸಿಬ್ಬಂದಿ ಕೊರೋನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದರಲ್ಲಿ 12 ಜನ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಾರ್ಯಾಲಯದಿಂದ ಬಿಡುಗಡೆ ದಾಖಲೆಗಳ ಪ್ರಕಾರ ಬೆಂಗಳೂರಿನಲ್ಲಿ ಈವರೆಗೆ 1369 ಜನ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಅದರಲ್ಲಿ 693 ಜನ ಮನೆಗಳಲ್ಲಿ ಕ್ವಾರೆಂಟೈನ್ ಒಳಗಾಗಿದ್ದಾರೆ. 16 ಸಿಬ್ಬಂದಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾನ್ಯ ವಾರ್ಡ್‌ನಲ್ಲಿ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ 726 ಸಕ್ರೀಯ ಕೋವಿಡ್ ಪ್ರಕರಣಗಳಿವೆ ಎಂದು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com