ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪನೆಗೆ ಸರ್ಕಾರ ಚಿಂತನೆ

ವಲಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ವಾರಗಳಲ್ಲಿ ಗ್ರಾಮೀಣ ಭಾಗದಲ್ಲಿಯೂ ಕೊರೋನಾ ಸೋಂಕಿತರ ಸಂಖಅಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ವಲಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ವಾರಗಳಲ್ಲಿ ಗ್ರಾಮೀಣ ಭಾಗದಲ್ಲಿಯೂ ಕೊರೋನಾ ಸೋಂಕಿತರ ಸಂಖಅಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ಕೇರ್ ಕೇಂದ್ರ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 

ಈಗಾಗಲೇ ರಾಜ್ಯ ಸರ್ಕಾರ ಪ್ರತೀ ಪಂಚಾಯತ್ ನಲ್ಲಿಯೂ ಕೋವಿಡ್ ನಿರ್ವಹಣಾ ಸಮಿತಿಯನ್ನು ಸ್ಥಾಪನೆ ಮಾಡಿದ್ದು, ಶಾಲೆಗಳು ಮತ್ತು ಹಾಸ್ಟೆಲ್‌ಗಳಂತಹ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಕ್ವಾರಂಟೈನ್ ಕೇಂದ್ರಗಳನ್ನು ಸ್ಥಾಪಿಸುವ ಜವಾಬ್ದಾರಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಹಿಸುವುದು. ಈ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸುವುದು, ಇದಕ್ಕಾಗಿ ಆಶಾ ಕಾರ್ಯಕರ್ತರ ಸಹಾಯ ಪಡೆದುಕೊಳ್ಳುವಂತೆ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯು(ಆರ್​ಡಿಪಿಆರ್) ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ. 

ನಗರ ಮತ್ತು ಪಟ್ಟಣಗಳಿಂದ ಹಳ್ಳಿಗಳಿಗೆ ಬರುತ್ತಿರುವವರ ಮೇಲೆ ಕೋವಿಡ್ ನಿರ್ವಹಣಾ ಸಮಿತಿ ನಿಗಾ ಇರಿಸಲಿವೆ ಹಾಗೂ ಅಂತಹವರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸುತ್ತವೆ. ಒಂದು ವೇಳೆ ಲಕ್ಷಣಗಳು ಕಂಡುಬಂದಿದ್ದೇ ಆದರೆ, ಅವರನ್ನು ಕೋವಿಡ್ ಕೇರ್ ಕೇಂದ್ರಗಳಿಗೂ ರವಾನಿಸುವ ಕೆಲಸವನ್ನೂ ಮಾಡಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com