ಮೇ 17 ರಿಂದ ಕೊಪ್ಪಳದಲ್ಲಿ ಸಂಪೂರ್ಣ ಲಾಕ್‌ಡೌನ್: ಬಿ.ಸಿ.ಪಾಟೀಲ್

ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಮೇ 17ರಿಂದ 21ರವರೆಗೆ ಐದು ದಿನಗಳ ಕಾಲ ಆರೋಗ್ಯ ಮತ್ತು ಕೃಷಿ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಎಲ್ಲವನ್ನು ಸಂಪೂರ್ಣವಾಗಿ ಲಾಕ್‌ಡೌನ್....
ಬಿಸಿ ಪಾಟೀಲ್
ಬಿಸಿ ಪಾಟೀಲ್
Updated on

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಮೇ 17ರಿಂದ 21ರವರೆಗೆ ಐದು ದಿನಗಳ ಕಾಲ ಆರೋಗ್ಯ ಮತ್ತು ಕೃಷಿ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಎಲ್ಲವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಶನಿವಾರ ಹೇಳಿದ್ದಾರೆ.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 31ರ ವರೆಗೆ ಜಿಲ್ಲೆಯಲ್ಲಿ ಯಾವುದೇ ಮದುವೆ ಮತ್ತು ಸಭೆ-ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಹಾಗೂ ಇತರ ವಿದ್ಯಾರ್ಥಿಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‌ಗಳಿಗೆ ಅವರನ್ನು ನಿಯೋಜಿಸಲು ಸಂಬಂಧಪಟ್ಟ ಮೆಡಿಕಲ್ ಕಾಲೇಜಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದರು.

ರೂಪಾಂತರಿ ಕೊರೋನಾ ವೈರಸ್ ಹೇಗೆ ನಮಗೆ ಹರಡುತ್ತದೆ ಎಂಬುದು ಗೊತ್ತಾಗುವುದಿಲ್ಲ. ಹಾಗಾಗಿ ಜನರು ಎಚ್ಚರಿಕೆಯಿಂದ ಇರಬೇಕು. ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್, ಔಷಧಿ ಹಾಗೂ ಇತರೆ ಯಾವುದೇ ಸಮಸ್ಯೆಗಳಿದ್ದರೆ ಮುಂಚಿತವಾಗಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಇಲ್ಲದಿದ್ದರೆ ಅದಕ್ಕೆ ತಾವೇ ಜವಾಬ್ದಾರರಾಗಬೇಕಾಗುತ್ತದೆ. ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಕೊರೋನಾ ಸಂಖ್ಯೆ ಕಡಿಮೆಯಾಗುತ್ತಿದ್ದು, ಜಿಲ್ಲೆಗಳಲ್ಲಿ ಇದರ ಸಂಖ್ಯೆ ಹೆಚ್ಚುತ್ತಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com