ಕೊರೋನಾ ನಿರ್ವಹಣೆ: ರಾಜ್ಯದ 17 ಡಿಸಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ, ಸಿಎಂ ಯಡಿಯೂರಪ್ಪ ಭಾಗಿ

ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ ಮತ್ತು ಲಸಿಕಾ ಅಭಿಯಾನ ಪ್ರಗತಿ ಕುರಿತು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ, ಸಚಿವರು ಮತ್ತು 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋಯವರು ಮಂಗಳವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.
ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿರುವ ಸಿಎಂ ಯಡಿಯೂರಪ್ಪ ಹಾಗೂ ಸಚಿವರು
ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿರುವ ಸಿಎಂ ಯಡಿಯೂರಪ್ಪ ಹಾಗೂ ಸಚಿವರು
Updated on

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ ಮತ್ತು ಲಸಿಕಾ ಅಭಿಯಾನ ಪ್ರಗತಿ ಕುರಿತು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ, ಸಚಿವರು ಮತ್ತು 17 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋಯವರು ಮಂಗಳವಾರ ವಿಡಿಯೋ ಸಂವಾದ ನಡೆಸುತ್ತಿದ್ದಾರೆ.

ಗೃಹ ಕಚೇರಿ ಕೃಷ್ಣಾದಿಂದ ಈ‌ ವಿಡಿಯೋ ಸಂವಾದದಲ್ಲಿ ಸಿಎಂ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣ್, ರಾಜ್ಯ ಸರ್ಕಾರದ ಸಿಎಸ್ ಪಿ.ರವಿಕುಮಾರ್ ಪಾಲ್ಗೊಂಡಿದ್ದಾರೆಂದು ತಿಳಿದುಬಂದಿದೆ. 

ಇದೇ ವೇಳೆ 17 ಜಿಲ್ಲೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಸಂವಾದದಲ್ಲಿ ಪಾಲ್ಗೊಂಡಿದ್ದು, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ, ಜಿಲ್ಲೆಗಳ ಕೊರೊನಾ ಸ್ಥಿತಿಗತಿ, ನಿರ್ವಹಣೆ ಬಗ್ಗೆ ಪ್ರಧಾನಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ವಿಡಿಯೋ ಸಂವಾದ ಬಳಿಕ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಸರ್ಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಹೆಚ್ಚು ಸೋಂಕಿರುವ ಪ್ರದೇಶಗಳಲ್ಲಿ ಪರೀಕ್ಷಗಳ ಸಂಖ್ಯೆಯನ್ನು ಹೆಚ್ಚಿಸುವುದು, ಲಸಿಕೆ ಅಭಿಯಾನವನ್ನು ತ್ವರಿತಗೊಳಿಸುವ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ರಾಜ್ಯದ 17 ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಿದ್ದು, ಸದ್ಯದ ಸ್ಥಿತಿಗತಿ ಈ ಸಂಬಂಧ ತೆಗೆದುಕೊಂಡಿರುವ ಕ್ರಮ, ಲಸಿಕಾ ಕಾರ್ಯಕ್ರಮದ ಪ್ರಗತಿ, ಆಕ್ಸಿಜನ್, ರೆಮ್ಡಿಸಿವಿರ್ ಔಷಧ ಲಭ್ಯತೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪ್ರಧಾನಿ ಮೋದಿಯವರು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com