ಕೊರೋನಾ ಸೋಂಕು ಹೆಚ್ಚಳ: 12ನೇ ತರಗತಿ ಪರೀಕ್ಷೆ ರದ್ದು ಮಾಡುವಂತೆ ಪ್ರಧಾನಿ ಮೋದಿಗೆ ಮನವಿ

ಎಲ್ಲೆಡೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 12ನೇ ತರಗತಿ ಸಿಬಿಎಸ್'ಸಿ ಆಫ್'ಲೈನ್ ಪರೀಕ್ಷೆ ರದ್ದು ಮಾಡುವಂತೆ ಸಾಮಾಜಿಕ ಜಾಲತಾಣ ಟ್ವೀಟಿಗರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)

ಬೆಂಗಳೂರು: ಎಲ್ಲೆಡೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 12ನೇ ತರಗತಿ ಸಿಬಿಎಸ್'ಸಿ ಆಫ್'ಲೈನ್ ಪರೀಕ್ಷೆ ರದ್ದು ಮಾಡುವಂತೆ ಸಾಮಾಜಿಕ ಜಾಲತಾಣ ಟ್ವೀಟಿಗರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ. 

ಟ್ವಿಟರ್ ನಲ್ಲಿ #Modiji_cancel12thboards ಹ್ಯಾಶ್ ಟ್ಯಾಗ್ ಬಳಸಲಾಗಿದ್ದು, ಸಿಬಿಎಸ್'ಸಿ ಆಫ್'ಲೈನ್ ಪರೀಕ್ಷೆ ರದ್ದು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಪರೀಕ್ಷೆ ರದ್ದು ಮಾಡಿ ಇದರ ಬದಲಿಗೆ ಕಾಲೇಜುಗಳಲ್ಲಿ ಪ್ರವೇಶಾತಿ ಪರೀಕ್ಷೆಗಳನ್ನು ಮಾಡಲಿ ಎಂದು ತಿಳಿಸಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಸಿಬಿಎಸ್'ಸಿ ಮಂಡಳಿ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿತ್ತು. ಜೂನ್ 1 ರಂದು 12ನೇ ತರಗತಿ ಪರೀಕ್ಷೆ ಕುರಿತು ದಿನಾಂಕ ಪ್ರಕಟಿಸುವುದಾಗಿ ತಿಳಿಸಿತ್ತು. ಹೀಗಾಗಿ 12ನೇ ತರಗತಿ ಪರೀಕ್ಷೆಯನ್ನೂ ರದ್ದು ಮಾಡುವಂತೆ ಆಗ್ರಹಗಳು ವ್ಯಕ್ತವಾಗುತ್ತಿವೆ. 

ಜೂನ್ 1 ರ ಬಳಿಕ ಪರೀಕ್ಷೆ ದಿನಾಂಕ ಪ್ರಕಟಿಸುವುದಾಗಿ ಮಂಡಳಿ ತಿಳಿಸಿದ್ದು, ಇದು ವಿದ್ಯಾರ್ಥಿಗಳಲ್ಲಿ ಒತ್ತಡ ಹೆಚ್ಚಾಗುವಂತೆ ಮಾಡಿದೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. 

ಗಣಿತ ಶಿಕ್ಷ ದಿನೇಶ್ ಕುಮಾರ್ ಗುಪ್ತಾ ಎಂಬುವವರು ಮಾತನಾಡಿ, ಪರೀಕ್ಷೆ ರದ್ದು ಮಾಡುವಂತೆ ಲಕ್ಷಾಂತರ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಒಂದೇ ತರಗತಿಯಲ್ಲಿದ್ದ ಕಾರಣ ವಿದ್ಯಾರ್ಥಿಗಳು ಇದೀಗ ನಿರಾಶೆಗೊಂಡಿದ್ದಾರೆಂದು ಹೇಳಿದ್ದಾರೆ. 

ಇಂಡಿಯಾ ವೈಡ್ ಪೇರೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತೆ ವಕೀಲೆ ಅನುಭಾ ಶ್ರೀವಾಸ್ತವ ಸಹೈ ಅವರು ಮಾತನಾಡಿ, ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಸಾಕಷ್ಟು ಒತ್ತಡದಲ್ಲಿದ್ದಾರೆ. ಕೊರೋನಾ 2ನೇ ಅಲೆ ಅತ್ಯಂತ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ. 

ಶಿಕ್ಷಣ ತಜ್ಞ ನಿರಂಜನರಾಧ್ಯ ವಿ ಪಿ ಅವರು ಮಾತನಾಡಿ, ಕೊರೋನಾ 3ನೇ ಅಲೆಗೆ ನಾವು ಸಿದ್ಧರಾಗಬೇಕಿದ್ದು, ಸರ್ಕಾರ ಆಫ್'ಲೈನ್ ಪರೀಕ್ಷೆಯನ್ನು ರದ್ದು ಮಾಡಬೇಕು. ಶಿಕ್ಷಮ ಸಚಿವಾರ ವಿದ್ಯಾರ್ಥಿಗಳ ಮನವಿಗಳನ್ನು ಆಲಿಸಬೇಕು. ಅವರ ಮನವಿ ಪ್ರಾಮಾಣಿಕವಾಗಿದೆಯೇ ಎಂಬುದನ್ನು ನೋಡಬೇಕು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com