ಕೊರೋನಾ ಸೋಂಕಿಗೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೋವಿಡ್ ಕೇರ್ ಕೇಂದ್ರಗಳು, ಪುನರ್ವಸತಿ ಕೇಂದ್ರಗಳು 

ಕೋವಿಡ್ ಸೋಂಕಿಗೆ ಪೋಷಕರಿಬ್ಬರನ್ನೂ ಕಳೆದುಕೊಂಡ ಹಲವು ಮಕ್ಕಳು ನಮ್ಮ ರಾಜ್ಯದಲ್ಲಿದ್ದಾರೆ. ಈ ಅನಾಥ ಮಕ್ಕಳಿಗೆ ಸರ್ಕಾರ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದ್ದು ಇಲ್ಲಿ 18 ವರ್ಷದವರೆಗೆ ಮಕ್ಕಳನ್ನು ನೋಡಿಕೊಳ್ಳಲಾಗುತ್ತದೆ. ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಮಕ್ಕಳ ಕೋವಿಡ್ ಕೇರ್ ಕೇಂದ್ರಗಳನ್ನು ರಚಿಸಲು ಸರ್ಕಾರ ಮುಂದಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೋವಿಡ್ ಸೋಂಕಿಗೆ ಪೋಷಕರಿಬ್ಬರನ್ನೂ ಕಳೆದುಕೊಂಡ ಹಲವು ಮಕ್ಕಳು ನಮ್ಮ ರಾಜ್ಯದಲ್ಲಿದ್ದಾರೆ. ಈ ಅನಾಥ ಮಕ್ಕಳಿಗೆ ಸರ್ಕಾರ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದ್ದು ಇಲ್ಲಿ 18 ವರ್ಷದವರೆಗೆ ಮಕ್ಕಳನ್ನು ನೋಡಿಕೊಳ್ಳಲಾಗುತ್ತದೆ. ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಮಕ್ಕಳ ಕೋವಿಡ್ ಕೇರ್ ಕೇಂದ್ರಗಳನ್ನು ರಚಿಸಲು ಸರ್ಕಾರ ಮುಂದಾಗಿದೆ.

ಅನಾಥ ಮಕ್ಕಳನ್ನು ದತ್ತು ಕೇಂದ್ರಗಳಿಗೆ ಕರೆದುಕೊಂಡು ಹೋಗಲಾಗುತ್ತದೆ. ಅಲ್ಲಿ 6 ವರ್ಷದವರೆಗಿನ ಮಕ್ಕಳಿಗೆ ಕ್ವಾರಂಟೈನ್ ವ್ಯವಸ್ಥೆಯಿರುತ್ತದೆ. 18 ವರ್ಷದವರೆಗಿನ ಹೆಣ್ಣು ಮತ್ತು ಗಂಡು ಮಕ್ಕಳಲ್ಲಿ ಕೊರೋನಾ ಸೋಂಕಿಗೆ ತುತ್ತಾದವರಿಗೆ ಪ್ರತ್ಯೇಕ ವ್ಯವಸ್ಥೆಯಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಕೋವಿಡ್ ನಿಂದ ಸಮಸ್ಯೆಗೆ ಒಳಗಾದ ಮಕ್ಕಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸಲು ನಾಲ್ಕು ಸನ್ನಿವೇಶಗಳಲ್ಲಿ ಸರ್ಕಾರ ನೋಡಿಕೊಳ್ಳುತ್ತದೆ. ಇಬ್ಬರೂ ಪೋಷಕರನ್ನು ಕಳೆದುಕೊಂಡಿದ್ದರೆ, ಇಬ್ಬರೂ ಪೋಷಕರು ಆಸ್ಪತ್ರೆ ಸೇರಿದರೆ, ಪೋಷಕರಲ್ಲಿ ಒಬ್ಬರು ಮೃತಪಟ್ಟು ಮತ್ತೊಬ್ಬರು ಆಸ್ಪತ್ರೆ ಸೇರಿದ್ದರೆ, ಪೋಷಕರಲ್ಲೊಬ್ಬರು ಆಸ್ಪತ್ರೆಗೆ ಸೇರಿ ಮತ್ತೊಬ್ಬರು ಬೇರೆ ಜಿಲ್ಲೆ, ಬೇರೆ ರಾಜ್ಯ, ಬೇರೆ ದೇಶಗಳಲ್ಲಿದ್ದರೆ ಅಂತಹ ಮಕ್ಕಳನ್ನು ಸರ್ಕಾರ ಪಡೆದುಕೊಳ್ಳುತ್ತದೆ.

ಮಕ್ಕಳ ಸಹಾಯವಾಣಿ 1098ಗೆ ಅಥವಾ 14499ಕ್ಕೆ ಕರೆ ಮಾಡಿ ಅನಾಥ ಮಕ್ಕಳ ಬಗ್ಗೆ ಮಾಹಿತಿ ನೀಡಬೇಕು. ಅದನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಅಂಕಿಅಂಶ ನೀಡಬೇಕು. ಅಂಗನವಾಡಿ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಸ್ವಯಂಸೇವಾ ಕಾರ್ಯಕರ್ತರಿಂದ ಹೆಚ್ಚುವರಿ ಮಾಹಿತಿ ಪಡೆಯಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com