ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜೀವ ರಕ್ಷಕ ಔಷಧಗಳ ಕಾಳಸಂತೆ ಮಾರಾಟ ತಡೆಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜೀವ ಉಳಿಸುವ ಔಷಧಗಳ ಕಾಳಸಂತೆ ಮಾರಾಟ ತಡೆಗಟ್ಟುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ಬೆಂಗಳೂರು: ಜೀವ ಉಳಿಸುವ ಔಷಧಗಳ ಕಾಳಸಂತೆ ಮಾರಾಟ ತಡೆಗಟ್ಟುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

ರೆಮ್‌ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದಲ್ಲಿ ಬಂಧನದಲ್ಲಿರುವ ಸೊಹೈಲ್ ಪಾಷಾ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಜಾಮೀನು ನೀಡಬೇಕೆಂದು ಸಲ್ಲಿಸಲಾಗಿರುವ ಅರ್ಜಿನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ಅವರಿದ್ದ ಪೀಠ, ಕೋವಿಡ್ ಸಮಯದಲ್ಲಿ ಜೀವ ಉಳಿಸಿಕೊಳ್ಳಲು ಜನ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಲಾಭ ಗಳಿಸುವ ಉದ್ದೇಶದಿಂದ ರೆಮ್‌ಡಿಸಿವರ್ ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪ ಅರ್ಜಿದಾರರ ವಿರುದ್ಧ ಇದೆ. ಕೋವಿಡ್ ರೋಗಿಗಳ ಜೀವದ ಜೊತೆ ಚೆಲ್ಲಾಟ ಆಡುವುದು ಆಘಾತಕಾರಿ ಸಂಗತಿ’ ಎಂದು ಹೇಳಿದೆ.

‘ಇವರಿಗೆ ಚುಚ್ಚುಮದ್ದು ಸಿಕ್ಕಿದ್ದು ಎಲ್ಲಿ ಎಂಬುದರ ಕುರಿತು ತನಿಖೆ ನಡೆಸಬೇಕು. ಈ ವಿಷಯದಲ್ಲಿ ಅಧಿಕಾರಿಗಳು ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಇನ್ನೂ ಹೆಚ್ಚಿನ ತನಿಖೆಯ ನಡೆಯಬೇಕಿದೆ. ಈ ರೀತಿಯ ದಂಧೆಯನ್ನು ನಿರ್ಮೂಲನೆ ಮಾಡಬೇಕಾದ ಅಗತ್ಯವಿದೆ’ ಎಂದು ಪೀಠ ತಿಳಿಸಿದೆ.

ಆರೋಪಿಗೆ ಜಾಮೀನು ನೀಡಲು ನಿರಾಕರಿಸಿರುವ ನ್ಯಾಯಪೀಠ, ತನಿಖೆಯ ಅಂತಿಮ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. 

ತಲಾ ರೂ.7 ಸಾವಿರಕ್ಕೆ 5 ಚುಚ್ಚುಮದ್ದನ್ನು ಮಾರಾಟ ಮಾಡಿದ ಆರೋಪದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಏ.17ರಿಂದ ಸೊಹೈಲ್ ಪಾಷಾ ನ್ಯಾಯಾಂಗ ಬಂಧನದಲ್ಲಿದ್ದಾರೆ

Related Stories

No stories found.

Advertisement

X
Kannada Prabha
www.kannadaprabha.com