ಕೊರೋನಾ: ರಾಜ್ಯದಲ್ಲಿ ಇಂದು 1,20,711 ಕೋವಿಡ್ ಟೆಸ್ಟ್; 28,869 ಜನರಿಗೆ ಸೋಂಕು, 548 ಮಂದಿ ಸಾವು

ರಾಜ್ಯದಲ್ಲಿ ಇಂದು ಹೊಸದಾಗಿ 28,869 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 548 ಮಂದಿ ಸಾವನ್ನಪ್ಪಿದ್ದಾರೆ.
ಕೊರೋನಾ: ರಾಜ್ಯದಲ್ಲಿ ಇಂದು 1,20,711 ಕೋವಿಡ್ ಟೆಸ್ಟ್; 28,869 ಜನರಿಗೆ ಸೋಂಕು, 548 ಮಂದಿ ಸಾವು
Updated on

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 28,869 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 548 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 14845 ರ್ಯಾಪಿಡ್ ಆಂಟಿಜನ್ ಟೆಸ್ಟ್ ಹಾಗೂ 105866 ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಗಳನ್ನು ನಡೆಸಲಾಗಿದೆ. ಒಟ್ಟಾರೆ 120711 ಕೊರೋನಾ ಟೆಸ್ಟ್ ನಡೆದಿದೆ.

ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 2335524 ಕ್ಕೆ ತಲುಪಿದ್ದು ಒಟ್ಟೂ 23854 ಮಂದಿ ಸಾವನ್ನಪ್ಪಿದ್ದಾರೆ.

ಇಂದು 52257 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 1776695 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ. ಸಧ್ಯ ರಾಜ್ಯದಲ್ಲಿ 534954 ಕೊರೋನಾ ಸಕ್ರಿಯ ಪ್ರಕರಣಗಳಿದೆ.

ಬೆಂಗಳೂರು ನಗರದಲ್ಲಿ ಇಂದು 9409 ಮಂದಿಗೆ ಹೊಸದಾಗಿ ಕೊರೋನಾ ಕಾಣಿಸಿಕೊಂಡಿದೆ. ಒಂದೇ ದಿನ 289 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com