ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳು: ಡಾ. ಕೆ.ಸುಧಾಕರ್

ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ಕೋವಿಡ್ ಸೋಂಕಿತರನ್ನು ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
ಡಾ ಕೆ ಸುಧಾಕರ್
ಡಾ ಕೆ ಸುಧಾಕರ್

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಸ್ಥಳೀಯರು, ಸಂಘಟನೆ, ಮುಖಂಡರಿದ್ದು, ಕೋವಿಡ್ ನಿರ್ವಹಣೆ ಮಾಡುತ್ತಾರೆ. ರೋಗಿಗೆ ಮನೆ ಆರೈಕೆ ಸೌಲಭ್ಯಗಳಿಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

2 ಕೋಟಿ ಕೋವಿಶೀಲ್ಡ್ ಲಸಿಕೆ ಖರೀದಿಸಲು ಸೆರಂ ಸಂಸ್ಥೆಗೆ ಆರ್ಡರ್ ನೀಡಲಾಗಿದೆ. ಈ ಪೈಕಿ 2 ಲಕ್ಷ ಡೋಸ್ ರಾಜ್ಯಕ್ಕೆ ಬಂದಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಹಾಗೂ ಮೊದಲ ಡೋಸ್ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಈವರೆಗೆ 1,11,26,340 ಡೋಸ್ ಲಸಿಕೆ ನೀಡಿದೆ. ರಾಜ್ಯ ಸರ್ಕಾರದಿಂದ ನೇರವಾಗಿ 9.50 ಲಕ್ಷ ಡೋಸ್ ಕೋವಿಶೀಲ್ಡ್, 1,44,170 ಕೋವ್ಯಾಕ್ಸಿನ್ ಖರೀದಿ ಸೇರಿ ಒಟ್ಟು 1,22,20,510 ಡೋಸ್ ಲಸಿಕೆ ರಾಜ್ಯಕ್ಕೆ ದೊರೆತಿದೆ. ಈವರೆಗೆ 1,13,61,234 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ಟೋಬರ್, ನವೆಂಬರ್ ಒಳಗೆ ರಾಜ್ಯದ ಎಲ್ಲರಿಗೂ ಲಸಿಕೆ ನೀಡಲು ಪ್ರಯತ್ನಿಸಲಾಗುತ್ತಿದೆ. ಭಾರತ್ ಬಯೋಟೆಕ್ ಘಟಕ ನಮ್ಮ ರಾಜ್ಯದಲ್ಲೇ ಇದ್ದು, ಅಲ್ಲಿಂದಲೂ ಲಸಿಕೆ ಸಿಗುವ ಭರವಸೆ ದೊರೆತಿದೆ. ಸ್ಪುಟ್ನಿಕ್ ಲಸಿಕೆ ಕೂಡ ನಮ್ಮ ರಾಜ್ಯದಲ್ಲೇ ಉತ್ಪಾದನೆಯಾಗಲಿದ್ದು, ಬೇಗ ಲಸಿಕೆ ಸಿಗುವ ವಿಶ್ವಾಸವಿದೆ ಎಂದರು.

ನಿನ್ನೆ 58,395 ಮಂದಿ ಕೋವಿಡ್ ನಿಂದ ಗುಣಮುಖರಾಗಿರುವುದು ಆಶಾದಾಯಕ. ಈವರೆಗೆ 16,74,487 ಜನರು ಕೋವಿಡ್ ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಯಾವಾಗಲೂ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ ನೋಡಿ ಆತಂಕಪಡಬಾರದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com