ಮಂಡ್ಯ: ಪತಿ ಕೊರೋನಾಗೆ ಬಲಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತ್ನಿ!

ಕೊರೋನಾ ಸೋಂಕಿನಿಂದ ಪತಿ ಮೃತಪಟ್ಟಿದ್ದು ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಪೂಜಾ-ಕಿರಣ್
ಪೂಜಾ-ಕಿರಣ್
Updated on: 

ಮಂಡ್ಯ: ಕೊರೋನಾ ಸೋಂಕಿನಿಂದ ಪತಿ ಮೃತಪಟ್ಟಿದ್ದು ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. 

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದ ಕಿರಣ್ ಮತ್ತು ಪೂಜಾ ದಂಪತಿ ಮೃತ ದುರ್ದೈವಿಗಳು. 

ಕಳೆದ 11 ತಿಂಗಳ ಹಿಂದೆ ಕಿರಣ್ ಹಾಗೂ ಪೂಜಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ಹತ್ತು ದಿನಗಳ ಹಿಂದೆ ಕಿರಣ್ ಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕತ್ಸೆ ನೀಡಲಾಗಿತ್ತು.

ಇಂದು ಚಿಕಿತ್ಸೆ ಫಲಕಾರಿಯಾಗದೇ ಕಿರಣ್ ಸಾವನ್ನಪ್ಪಿದ್ದು ಕೋವಿಡ್ ನಿಯಮಗಳಂತೆ ಬೊಮ್ಮೆನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಅಂತ್ಯಸಂಸ್ಕಾರದ ಬಳಿ ಪೂಜಾ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com