ರಾಜ್ಯದಲ್ಲಿ 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ: ಸಚಿವ ಸುಧಾಕರ್

ರಾಜ್ಯದಲ್ಲಿ 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಇರುವ ಬಗ್ಗೆ ಕಪ್ಪು ಶಿಲೀಂದ್ರ ಸಮಿತಿ ನೀಡಿದ ಪ್ರಾಥಮಿಕ ವರದಿಯಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.
ಡಾ ಕೆ ಸುಧಾಕರ್
ಡಾ ಕೆ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಇರುವ ಬಗ್ಗೆ ಕಪ್ಪು ಶಿಲೀಂದ್ರ ಸಮಿತಿ ನೀಡಿದ ಪ್ರಾಥಮಿಕ ವರದಿಯಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನು ತಡಗಟ್ಟುವ ಬಗೆಯನ್ನೂ ಇದರಲ್ಲಿ ತಿಳಿಸಲಾಗಿದೆ ಎಂದರು.

ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‍ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಹಾಗೂ ಕೋವಿಡ್ ನಿಂದ ಗುಣಮುಖರಾದವರಿಗೆ ಇಎನ್ ಟಿ ವೈದ್ಯರು 3, 7, 21ನೇ ದಿನ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ವ್ಯವಸ್ಥೆ ಇದೆ. ಆದರೆ ಔಷಧಿ ಸ್ವಲ್ಪ ಕೊರತೆ ಇದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಜೊತೆ ಚರ್ಚಿಸಲಾಗಿದೆ ಎಂದರು.

ಇಡೀ ದೇಶದಲ್ಲಿ ವರ್ಷಕ್ಕೆ 100-200 ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ 300ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಕಂಡುಬರುತ್ತಿದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರ 1 ಸಾವಿರಕ್ಕೂ ಅಧಿಕ ವೈಲ್ ಗಳನ್ನು ಕಳುಹಿಸಿಕೊಡುವ ನಿರೀಕ್ಷೆ ಇದೆ ಎಂದು ಸಚಿವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com