ಬಿಜಿಎಸ್ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಮೇಲೆ‌ ಹಲ್ಲೆ: ಇಬ್ಬರ ಬಂಧನ

ನಗರದ ಬಿಜಿಎಸ್ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ‌ ಮೇಲೆ ಹಲ್ಲೆ‌ ಮಾಡಿ, ವೈದ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಕೆಂಗೇರಿ‌ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ನಗರದ ಬಿಜಿಎಸ್ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ‌ ಮೇಲೆ ಹಲ್ಲೆ‌ ಮಾಡಿ, ವೈದ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಕೆಂಗೇರಿ‌ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ನಾಗರಬಾವಿಯ ಪ್ರಶಾಂತ್ (39) ಹಾಗೂ ಬ್ಯಾಡರಹಳ್ಳಿಯ ವೆಂಕಟೇಶ್ (32) ಗುರ್ತಿಸಲಾಗಿದೆ. 

'ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ‌. ಆರೋಪಿಗಳ ಸಂಬಂಧಿಯೊಬ್ಬರು ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. 

ಬಂಧನಕ್ಕೊಳಗಾಗಿರುವ ಇಬ್ಬರು 'ಸಂಬಂಧಿಯನ್ನು ನೋಡಲು ವಾರ್ಡ್‌ನೊಳಗೆ ಬಿಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಜೊತೆಗೂ ಜಗಳ ಮಾಡಿದ್ದಾರೆ. ಇದೇ ವೇಳೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಪ್ರಶ್ನಿಸಲು ಬಂದ ವೈದ್ಯರನ್ನು ಅವಾಚ್ಯ ಶಬ್ದಗಳಿಂದ ‌ನಿಂದಿಸಿದ್ದಾರೆ. ಅಲ್ಲದೆ, ಆಸ್ಪತ್ರೆ ಆಸ್ತಿಗೂ ಹಾನಿ ಮಾಡಿದ್ದಾರೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com