ಬಾಬು
ರಾಜ್ಯ
ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ
ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.
ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ ಮತ್ತು ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧರಿಸಿ ಆರೋಪಿಯ ಬಂಧನವಾಗಿದೆ ಎಂದು ಪೋಲೀಸರು ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ವಲಯದ ಕೋವಿಡ್ ವಾರ್ ರೂಮ್ ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎನ್ನಲಾಗಿ ಇದನ್ನು ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಈ ತಿಂಗಳ ಆರಂಭದಲ್ಲಿ ಬಯಲು ಮಾಡಿದ್ದರು. ಸದ್ಯ ಇಡೀ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ


