ಕೊರೋನಾ ಎಫೆಕ್ಟ್: ಇ–ಮೇಲ್ ಮೂಲಕ ನೋಟಿಸ್ ಜಾರಿಗೊಳಿಸಿಲು ಹೈಕೋರ್ಟ್ ಮುಂದು
ಬೆಂಗಳೂರು: ರಾಜ್ಯ ಕೊರೋನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಹೈಕೋರ್ಟ್, ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮತ್ತು ಮಂಡಳಿಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರ ಇತರೆ ಸಂಸ್ಥೆಗಳು ಇ–ಮೇಲ್ ಮೂಲಕ ನೀಡುವ ನೋಟಿಸ್‌ಗಳನ್ನು ಸ್ವೀಕರಿಸಬೇಕೆಂದು ತಿಳಿಸಿದೆ.
ಸಾಂಕ್ರಾಮಿಕ ರೋಗದಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ದಾಖಲಿಸಿಕೊಳ್ಳಲಾಗಿರುವ ಸ್ವಯಂಪ್ರೇರಿತ ಅರ್ಜಿಗಳ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠವು ಈ ನಿರ್ದೇಶನ ನೀಡಿದೆ.
ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಹೈಕೋರ್ಟ್'ಗಳೂ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುತ್ತಿರುವುದನ್ನು ಉಲ್ಲೇಖಿಸಿದ ನ್ಯಾಯಪೀಠ, ರಾಜ್ಯ ಹಾಗೂ ಕೇಂದ್ರ ಸರ್ಕಾರ, ನಿಗಮ ಮತ್ತು ಮಂಡಳಿ, ಬಿಬಿಎಂಪಿ ಹಾಗೂ ಬಿಡಿಎಗಳು ಇಮೇಲ್ ಮೂಲಕ ನೋಟಿಸ್ ಸ್ವೀಕರಿಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಬೆಂಗಳೂರು: ಕೋವಿಡ್ ಕಾರಣದಿಂದ ಕೆಲ ವರ್ಗಗಳ ಪ್ರಕರಣಗಳನ್ನು ವಿಲೇವಾರಿ ಮಾಡಲು ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನೀಡಲಾದ ಸಮಯದ ವೇಳಾಪಟ್ಟಿಯನ್ನು ಹೈಕೋರ್ಟ್ ವಿಸ್ತರಿಸಿದೆ.
ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳ ವಿಲೇವಾರಿಗೆ ನಿಗದಿಪಡಿಸಿದ ಗಡುವಿನಲ್ಲೇ ಕೆಲ ಪ್ರಕರಣಗಳ ವಿಲೇವಾರಿ ಕಷ್ಟ ಎಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಹೊರಡಿಸಿದ ಎಸ್‌ಇಪಿ (ಮಾರ್ಗದರ್ಶಿ ಸೂತ್ರ) ತಿಳಿಸಿದೆ.
ನಿಗದಿತ ಸಮಯ ಮೀರಿದ ಪ್ರಕರಣಗಳನ್ನು ವಿಲೇವಾರಿ ಮಾಡಲು ಅವಧಿಯನ್ನು ಮೂರು ತಿಂಗಳಿಗೆ ವಿಸ್ತರಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ