ಜೂನ್ 7 ರವರೆಗೆ ಉಡುಪಿಯಲ್ಲಿ ವಿವಾಹ ಸಮಾರಂಭಕ್ಕೆ ಅವಕಾಶವಿಲ್ಲ!

ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಜೂನ್ 7ರವರೆಗೆ ಯಾವುದೇ ಮದುವೆ ಸಮಾರಂಭಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಗಳೂರು: ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಜೂನ್ 7ರವರೆಗೆ ಯಾವುದೇ ಮದುವೆ ಸಮಾರಂಭಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಸಭೆ ನಡೆಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದೇವೆ. ಮದುವೆ ಸಮಾರಂಭಗಳ ಬಳಿಕ ಕೋವಿಡ್ ಪ್ರಕರಣಗಳು ಕಂಡು ಬರುತ್ತಿದೆ. ಹೀಗಾಗಿ ಮದುವೆಗೆ ಇಂದು ಸಂಜೆಯವರೆಗೆ ನೀಡಲಾದ ಅನುಮತಿ ಮಾತ್ರ ಮಾನ್ಯವಾಗಿರುತ್ತದೆ. ಜೂ.7ರವರೆಗೆ ಮದುವೆ ಸಮಾರಂಭಗಳಿಗೆ ಅನುಮತಿ ಇಲ್ಲ. ನಿಶ್ಚಿತಾರ್ಥ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. 

ಮಹೆಂದಿ, ಬೀಗರೂಟ ಮುಂತಾದ ಕಾರ್ಯಕ್ರಮ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಕಾರ್ಯಕ್ರಮದಲ್ಲಿ ಯಾರು ಭಾಗವಹಿಸಿದ್ದಾರೆ ಅವರಿಗೂ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com