ಕೋವಿಡ್-19: ಸ್ಥಳೀಯ ಕಂಟೈನ್ಮೆಂಟ್ ಝೋನ್ ಮೇಲೆ ನಿಗಾ ಇರಿಸುವಂತೆ ಗ್ರಾಮ ಪಂಚಾಯಿತಿಗಳಿಗೆ ಸೂಚನೆ

ನಗರ ಬಳಿಕ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕಂಟೈನ್ಮೆಂಟ್ ಝೋನ್ ಗಳ ಮೇಲೆ ಹೆಚ್ಚಿನ ನಿಗಾ ಇರುವಂತೆ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರ ಬಳಿಕ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಕಂಟೈನ್ಮೆಂಟ್ ಝೋನ್ ಗಳ ಮೇಲೆ ಹೆಚ್ಚಿನ ನಿಗಾ ಇರುವಂತೆ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಸೂಚನೆ ನೀಡಿದೆ. 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯಗಳಲ್ಲಿ ಸಮಿತಿ ರಚಿಸಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಸಮಿತಿಗಳಲ್ಲಿ ಸ್ಥಳೀಯ ಅಧಿಕಾರಿಗಳು ಹಾಗೂ ಪೊಲೀಸರು ಇರಲಿದ್ದಾರೆ ಎಂದು ಹೇಳಿದ್ದಾರೆ. 

ಹಳ್ಳಿಗಳಲ್ಲಿ ಕೊರೋನಾ ಹರಡುವಿಕೆ ನಿಯಂತ್ರಣಕ್ಕೆ ಸರ್ಕಾರ ಹೆಚ್ಚಿನ ನಿಗಾವಹಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾದರೆ ಆ ಹಳ್ಳಿಯನ್ನು ಮೈಕ್ರೋ ಕಂಟೈನ್ಮೆಂಟ್ ವಲಯ ಎಂದು ಗುರಿಸಲಾಗುತ್ತದೆ. ಈ ವಲಯಗಳಿಗೆ ನಿಯಮಿತವಾಗಿ ಸೋಂಕಿತರ ಆರೋಗ್ಯ ತಪಾಸಣೆ ನಡೆಸುವಂತೆ ವೈದ್ಯರಿಗೆ ಆದೇಶಿಸಲಾಗಿದೆ. 

ವಿಟಮಿನ್ ಸಿ, ಜಿಂಕ್ ಸೇರಿದಂತೆ ಕೊರೋನಾ ಸೋಂಕಿತರಿಗೆ ನಿಡಲಾಗುವ ಎಲ್ಲಾ ಔಷಧೋಪಚಾರವನ್ನೂ ಮಾಡಲಾಗುತ್ತದೆ. ಕಡ್ಡಾಯವಾಗಿ ಆರ್'ಟಿಪಿಸಿಆರ್ ಹಾಗೂ ಆರ್'ಎಟಿ ಟೆಸ್ಟಿಂಗ್ ನಡೆಸಲಾಗುತ್ತದೆ ಎಂದು ವಿವರಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com