ಮೇಕೆದಾಟು ಯೋಜನೆ ಪರಿಶೀಲನೆಗೆ ಜಂಟಿ ಸಮಿತಿ ರಚನೆ; ಎನ್ ಜಿಟಿ ಆದೇಶ ಪ್ರಶ್ನಿಸಿ ಮೇಲ್ಮನವಿ: ಬೊಮ್ಮಾಯಿ

ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ. 
ಬಸವರಾಜು ಬೊಮ್ಮಾಯಿ
ಬಸವರಾಜು ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ. 

ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಅಡ್ವೊಕೇಟ್‌ ಜನರಲ್‌ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ನಿರ್ಧಾರ ಸರಿಯಿಲ್ಲ ಎಂದು ವಾದಿಸಲಿದೆ ಎಂದರು.

ಮೇಕೆದಾಟು ಸಮೀಪದ ರಸ್ತೆಗಳ ಕುರಿತ ವರದಿ ಆಧರಿಸಿ,ಈ ತೀರ್ಪು ನೀಡಲಾಗಿದೆ. ಇದು ಸರಿಯಲ್ಲ ಎಂದು ಬಸವರಾಜು ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.

ಮೇಕೆದಾಟುವಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳ ಆರೋಪಕ್ಕೆ ಸಂಬಂಧಿಸಿದಂತೆ  ಪರಿಶೀಲಿಸಲು ಜಂಟಿ ಸಮಿತಿಯೊಂದನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನೇಮಿಸಿದ್ದು, ಜುಲೈ 5ರೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ನಿರ್ದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com