ರಾಜ್ಯದಲ್ಲಿ ಪಾಸಿಟಿವ್ ಪ್ರಮಾಣ ಇಳಿಕೆ: ಇಂದು ಕೊರೋನಾಗೆ 401 ಬಲಿ, ಬೆಂಗಳೂರಿನಲ್ಲಿ 5,736 ಸೇರಿ 22,823 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬರೋಬ್ಬರಿ 401 ಮಂದಿ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬರೋಬ್ಬರಿ 401 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 27,806ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 22758 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25,46,821ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 5,736 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,49,614ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 192 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 52,253 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 21,46,621ಕ್ಕೆ ಏರಿಕೆಯಾಗಿದೆ. ಇನ್ನು 3,72,373 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,38,983 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 22,823 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 16.42ಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com