ಜೂನ್ 5 ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶ ನಿರೀಕ್ಷೆ

ಕೇರಳಕ್ಕೆ ಮೇ 31 ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಈ ಕಾರಣದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇರಳಕ್ಕೆ ಮೇ 31 ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಈ ಕಾರಣದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 5ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶಿಸುವ ನಿರೀಕ್ಷೆ ಇದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಹೇಳಿದೆ.

ಇನ್ನು ರಾಜ್ಯದ್ಲಲಿ ನಾಳಿನವರೆಗೂ ಕೆಲವು ಕಡೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com