ಬೆಂಗಳೂರಿನಲ್ಲಿ ರೌಡಿಶೀಟರ್ ಕೊಲೆ ಯತ್ನ: ನಾಲ್ವರ ಬಂಧನ

ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಎದುರಾಳಿ ಗುಂಪಿನ ರೌಡಿಶೀಟರ್ ಕೊಲೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌‌.
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು
Updated on

ಬೆಂಗಳೂರು: ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಎದುರಾಳಿ ಗುಂಪಿನ ರೌಡಿಶೀಟರ್ ಕೊಲೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌‌.

ರೌಡಿಶೀಟರ್ ಗಳಾದ ಸೋಮ, ಮಧು, ಸುಮಂತ್ ಹಾಗೂ ಮುನಿಮಲ್ಲಪ್ಪ ಬಂಧಿತ ಆರೋಪಿಗಳು.

ಬಂಧಿತರು ವಿರೋಧಿ ಬಣದಲ್ಲಿದ್ದ ರೌಡಿಶೀಟರ್ ರೋಹಿತ್ ಹತ್ಯೆಗೆ ಸಂಚುರೂಪಿಸಿದ್ದರು. ರೋಹಿತ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದನು. ವರ್ತೂರು ಕೆರೆ ಕೊಡಿ ಬಳಿ ರೋಹಿತ್ ಬರಲಿದ್ದಾನೆ ಎಂಬ ಮಾಹಿತಿ ಅರಿತ ಆರೋಪಿಗಳು ಮಾರಕಾಸ್ತ್ರ ಹಿಡಿದು ಕೊಲೆಗೆ ಸಂಚು ರೂಪಿಸಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com