ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ: ಓರ್ವ ಆರೋಪಿಗೆ ಕೊರೋನಾ ಸೋಂಕು

ಮಾರಕ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲೇ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣದ ಓರ್ವ ಆರೋಪಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾನೆ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಾರಕ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲೇ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣದ ಓರ್ವ ಆರೋಪಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾನೆ ಎಂದು ತಿಳಿದುಬಂದಿದೆ.

ಗ್ಯಾಂಗ್ ರೇಪ್ ಪ್ರಕರಣ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಐವರು ಆರೋಪಿಗಳಿಗೆ ಕೊರೊನಾ ಸೋಂಕು ದೃಢಪಡಿಸಲು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರು ಆರೋಪಿಗಳ ಪೈಕಿ ಓರ್ವ ಆರೋಪಿಗೆ ಕೊರೊನಾ ಸೋಂಕು ಪಾಸಿಟಿವ್ ಇರುವುದು ಬೆಳಕಿಗೆ ಬಂದಿದ್ದು, ಆತನನ್ನು ಪ್ರತ್ಯೇಕ  ಸೆಲ್ ನಲ್ಲಿ ಇಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉಳಿದಂತೆ ಈ ಪ್ರಕರಣದಲ್ಲಿ ಶಾಮೀಲಾಗಿರುವ ಇತರೆ ಇಬ್ಬರು ಮಹಿಳೆಯರನ್ನು ಕೂಡ ಪೊಲೀಸರು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.  

ಇನ್ನು ಈಗಾಗಲೇ ಸಂತ್ರಸ್ಥ ಯುವತಿನ್ನು ಕೇರಳದಿಂದ ಕರೆ ತಂದಿರುವ ಪೊಲೀಸರು ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೇಳಿಕೆ ಕೂಡ ದಾಖಲಿಸಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ?
ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟೆಲ್ ಇರಿಸಿ ಕಾಮುಕರು ವಿಕೃತಿ ಮರೆದಿದ್ದಾರೆ. ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ವರು ಕಾಮುಕರಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ. ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್  ಬಂಧಿತ ಆರೋಪಿಗಳು. ಆರೋಪಿಗಳು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸಂತ್ರಸ್ಥೆ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ವಾಸವಾಗಿದ್ದರು. ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ  ಘಟನೆಯನ್ನು ಕಿರಾತಕರು ವೀಡಿಯೋ ಮಾಡಿದ್ದಾರೆ. ಯುವತಿಯ ಮೇಲೆ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಅತ್ಯಾಚಾರದ ವೀಡಿಯೋ ವೈರಲ್ ಆಗಿತ್ತು. ಅಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಅಸ್ಸಾಂ ರಾಜ್ಯದ  ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ವೀಡಿಯೋದಲ್ಲಿ ಬಾಂಗ್ಲಾ ಪ್ರಜೆಗಳು ಭಾಗಿಯಾಗಿದ್ದರಿಂದ ಅಲ್ಲಿನ ಪೊಲೀಸರಿಗೂ ಮಾಹಿತಿ ರವಾನಿಸಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ತೆಯ ಕುಟುಂಬಸ್ಥರನ್ನ ಪತ್ತೆ ಮಾಡಿದ್ದಾರೆ. ಆ ನಂತರ ಘಟನೆ ಬೆಂಗಳೂರಿನಲ್ಲಿ ನಡೆದಿರೋದು ಬಗ್ಗೆ ತಿಳಿದು ಬಂದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com