ಎಕೆ ಶಾಸ್ತ್ರಿ ಸ್ಮಾರಕ
ಎಕೆ ಶಾಸ್ತ್ರಿ ಸ್ಮಾರಕ

ಅಂತಿಮ ಹಂತದಲ್ಲಿ ಎಕೆ ಶಾಸ್ತ್ರಿ ಸ್ಮಾರಕ ನಿರ್ಮಾಣ ಕಾರ್ಯ

ಕಳೆದ 10 ವರ್ಷಗಳಿಂದ ನಡೆಯುತ್ತಿರುವ ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಎ.ಆರ್.ಕೃಷ್ಣ ಶಾಸ್ತ್ರಿ ಅವರ ಸ್ಮಾರಕ ಹಾಗೂ ವಸ್ತುಸಂಗ್ರಹಾಲಯ ನಿರ್ಮಾಣ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು: ಕಳೆದ 10 ವರ್ಷಗಳಿಂದ ನಡೆಯುತ್ತಿರುವ ಕನ್ನಡ ಸಾಹಿತ್ಯ ಲೋಕದ ಅಪ್ರತಿಮ ಎ.ಆರ್.ಕೃಷ್ಣ ಶಾಸ್ತ್ರಿ ಅವರ ಸ್ಮಾರಕ ಹಾಗೂ ವಸ್ತುಸಂಗ್ರಹಾಲಯ ನಿರ್ಮಾಣ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ ಎಂದು ತಿಳಿದುಬಂದಿದೆ.

ಸ್ಮಾರಕ ನಿರ್ಮಾಣಗೊಳ್ಳುತ್ತಿರುವ ಕಟ್ಟಡದಲ್ಲಿ ಆಡಿಟೋರಿಯಂ, ಗ್ರಂಥಾಲಯ ಮತ್ತು ವಸ್ತುಸಂಗ್ರಹಾಲಯವನ್ನು ಹೊಂದಿರಲ್ಲಿದ್ದು, ಇಲ್ಲಿ ಎಕೆ ಶಾಸ್ತ್ರಿ ಬಳಸುವ ದೈನಂದಿನ ವಸ್ತುಗಳನ್ನು ಪ್ರದರ್ಶಿಸಲಾಗುತ್ತದೆ.

ಸ್ಮಾರಕ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದರೂ,ಸ್ಮಾರಕದ ಸ್ಥಳದ ಬಗ್ಗೆ ಸ್ಥಳೀಯ ಸಾಹಿತಿಗಳ ನಡುವೆ ಭಿನ್ನಾಭಿಪ್ರಾಯಗಳಿದ್ದ ಕಾರಣ ನಿರ್ಮಾಣ ಕಾರ್ಯ ವಿಳಂಬವಾಗಿತ್ತು. ಸ್ಮಾರಕವನ್ನು ಚಿಕ್ಕಮಗಳೂರಿನಲ್ಲಿ ನಿರ್ಮಾಣ ಮಾಡಬೇಕೆಂದು ಹಲವರು ಬಯಸಿದ್ದರು. ಇದೀಗ ಸ್ಥಳದ ಕುರಿತ ಎಲ್ಲಾ ಗೊಂದಲಗಳೂ ದೂರಾಗಿದ್ದು, ಅಂಬ್ಲೆಯಲ್ಲಿರುವ ಪಂಚಾಯತ್ ಕಚೇರಿ ಹಿಂಭಾಗದಲ್ಲಿ ಭವ್ಯ ಕಟ್ಟಡ ನಿರ್ಮಾಣವಾಗುತ್ತಿದೆ.

2009ರಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 90 ಲಕ್ಷ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಇದರಂತೆ ಮೊದಲ ಕಂತಿನ ರೂಪದಲ್ಲಿ ರೂ.50 ಲಕ್ಷ ಬಿಡುಗಡೆ ಮಾಡಿತ್ತು. ಕಾಮಗಾರಿ ವಹಿಸಿದ್ದ ಲೋಕೋಪಯೋಗಿ ಇಲಾಖೆ ಅಂದಾಜು 1.31 ಕೋಟಿ ರೂ. ಎಂದು ಪರಿಷ್ಕರಿಸಿ ಸರ್ಕಾರಕ್ಕೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ಒಪ್ಪಿಗೆ ಸಿಗದೇ ಮೂರು ವರ್ಷಗಳಿಂದ ಕಾಮಗಾರಿ ಪ್ರಗತಿ ಕಂಡಿರಲಿಲ್ಲ.

ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದ್ದಂತೆ ಅಂದಿನ ಕಾಂಗ್ರೆಸ್'ನ ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ತರಾತುರಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರೂ ಪರಿಷ್ಕೃತ ಅಂದಾಜಿಗೆ ಸರ್ಕಾರರ ಅನುಮೋದನೆ ಸಿಕ್ಕಿರಲಿಲ್ಲ.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರ ಸ್ವಾಮಿ ಹಾಗೂ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರ ಪ್ರಯತ್ನದಿಂದ 2018ರಲ್ಲಿ ಯಡಿಯೂರಪ್ಪ ಮತ್ತೆ ಅಧಿಕಾರಕ್ಕೆ ಬಂದ ನಂತರವೇ ಕಾಮಗಾರಿ ವೇಗ ಪಡೆದುಕೊಂಡಿತ್ತು. ಇದೀಗ ಸ್ಮಾರಕ ನಿರ್ಮಾಣ ಕಾರ್ಯ ಅಂತಿಮ ಹಂತ ತಲುಪಿದ್ದು, ಹಲವರಲ್ಲಿ ಸಂತಸ ತಂದಿದೆ.

Related Stories

No stories found.

Advertisement

X
Kannada Prabha
www.kannadaprabha.com